ಮುಂಡಾಜೆ ಗ್ರಾ ಪಂ.: ನೂತನ ಅಧ್ಯಕ್ಷರಾಗಿ ರಂಜಿನಿ,ಉಪಾಧ್ಯಕ್ಷೆ ದಿಶಾ ಆಯ್ಕೆ

ಮುಂಡಾಜೆ: ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮ ಪಂಚಾಯಿತ್  ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಫೆ.11ರಂದು ಚುನಾವಣೆ ನಡೆದಿದ್ದು, ನೂತನ ಅಧ್ಯಕ್ಷರಾಗಿ ರಂಜಿನಿ ಹಾಗೂ ಉಪಾಧ್ಯಕ್ಷೆಯಾಗಿ ದಿಶಾ ಆಯ್ಕೆಯಾಗಿದ್ದಾರೆ

ಒಟ್ಟು 11 ಸದಸ್ಯ ಸ್ಥಾನಕ್ಕೆ ಚುನಾವಣೆ ನಡೆದಿದ್ದು, 11ಕ್ಕೆ 11 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು ಜಯ ಸಾಧಿಸುವ ಮೂಲಕ  ಕ್ಲೀನ್ ಸ್ವೀಪ್ ಆಗಿದೆ.

ಪ.ಜಾತಿ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ವಾರ್ಡ್-4 ರಿಂದ ರಂಜಿನಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರೆ, ಸಾಮಾನ್ಯ ಮಹಿಳೆ ಮೀಸಲಿನ ಉಪಾಧ್ಯಕ್ಷ ಸ್ಥಾನಕ್ಕೆ ವಾರ್ಡ್-2ರಿಂದ ಸ್ಪರ್ಧಿಸಿದ ಮಾಜಿ ಅಧ್ಯಕ್ಷೆ ದಿಶಾ ಪಟವರ್ಧನ್ ಅವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

ಚುನಾವಣೆ ಪ್ರಕ್ರಿಯೆಯಲ್ಲಿ ಕೃಷಿ ಇಲಾಖೆ ಅಧಿಕಾರಿ ಶೈಲಜಾ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದು, ಪಿಡಿಒ ಸುಮಾ ಎ.ಎಸ್ ಹಾಗೂ ಕಾರ್ಯದರ್ಶಿ ಸಂಜೀವ ನಾಯ್ಕ್ ಸಹಕರಿಸಿದರು.ಈ ಸಂದರ್ಭದಲ್ಲಿ  ಗ್ರಾ.ಪಂ ನೂತನ ಸದಸ್ಯರು, ಗ್ರಾ.ಪಂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.