ನಿಡ್ಲೆ ಗ್ರಾ.ಪಂ ಅಧ್ಯಕ್ಷರಾಗಿ ಪಿ. ಪ್ರವೀಣ್ ಹೆಬ್ಬಾರ್ ಉಪಾಧ್ಯಕ್ಷರಾಗಿ ಶ್ಯಾಮಲಾ ಅವಿರೋಧ ಆಯ್ಕೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ನಿಡ್ಲೆ: ನಿಡ್ಲೆ ಗ್ರಾಮ ಪಂಚಾಯತದ ನೂತನ ಅಧ್ಯಕ್ಷರಾಗಿ ಪಿ.ಪ್ರವೀಣ್ ಹೆಬ್ಬಾರ್ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಶ್ಯಾಮಲಾ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಿಡ್ಲೆ ಗ್ರಾ.ಪಂನಲ್ಲಿ ಫೆ.11 ರಂದು ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕೊಕ್ಕಡ ರೈತ ಸಂಪರ್ಕ ಕೇಂದ್ರದ ಸಹಾಯಕ ಕೃಷಿ ಅಧಿಕಾರಿ ಎಸ್.ಚಿದಾನಂದ ಹೂಗಾರ್ ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ, ಕಾರ್ಯದರ್ಶಿ ಶ್ರವಣ್ ಕುಮಾರ್, ಗ್ರಾ.ಪಂ ಸದಸ್ಯರು, ಗ್ರಾ.ಪಂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


ನಿಡ್ಲೆ ಗ್ರಾಮ ಪಂಚಾಯತದ ಒಟ್ಟು 8 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 6 ಸ್ಥಾನಗಳನ್ನು ಪಡೆದ ಬಿಜೆಪಿ ಬೆಂಬಲಿತರು ಅಧಿಕಾರದ ಗದ್ದುಗೆಗೆ ಏರಿದ್ದಾರೆ. 2 ಸ್ಥಾನಗಳು ಪಕ್ಷೇತರರ ಪಾಲಾಗಿದ್ದು, ಕಾಂಗ್ರೆಸ್ ಬೆಂಬಲಿತರು ಇಲ್ಲಿ ಯಾವುದೇ ಸ್ಥಾನಕ್ಕೆ ಸ್ಪರ್ಧಿಸಿರಲಿಲ್ಲ.


ನಿಡ್ಲೆ ಗ್ರಾಮ ಪಂಚಾಯತದಲ್ಲಿ ಅಧ್ಯಕ್ಷ ಗಾದಿಗೆ ಸಾಮಾನ್ಯ ಸ್ಥಾನ ಮೀಸಲಾತಿ ನಿಗದಿಯಾಗಿದ್ದು, ನಿಡ್ಲೆ ವಾರ್ಡ್-1 ರಲ್ಲಿ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದ ಪಿ. ಪ್ರವೀಣ್ ಹೆಬ್ಬಾರ್ ರವರು ಅಧ್ಯಕ್ಷ ಸ್ಥಾನಕ್ಕೆ ಹಾಗೂ ನಿಡ್ಲೆ ವಾರ್ಡ್-2ರಲ್ಲಿ ಸಾಮಾನ್ಯ ಮಹಿಳೆ ಕ್ಷೇತ್ರದಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದ ಶ್ಯಾಮಲಾ ರವರು ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿ ಅವಿರೊಧವಾಗಿ ಆಯ್ಕೆಯಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.