ತೆಕ್ಕಾರು ಗ್ರಾ.ಪಂ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ಉಪಾಧ್ಯಕ್ಷರಾಗಿ ಪುಷ್ಪಾ ಅವಿರೋಧ ಆಯ್ಕೆ

ತೆಕ್ಕಾರು: ತೆಕ್ಕಾರು ಗ್ರಾಮ ಪಂಚಾಯತದ ನೂತನ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಪುಷ್ಪಾ ಕೆ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ತೆಕ್ಕಾರು ಗ್ರಾ.ಪಂ. ನಲ್ಲಿ ಫೆ.11 ರಂದು ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬೆಳ್ತಂಗಡಿ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ರಂಜಿತ್ ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸುಮಯ್ಯ, ಗ್ರಾ.ಪಂ ಸದಸ್ಯರು, ಗ್ರಾ.ಪಂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ತೆಕ್ಕಾರು ಗ್ರಾಮ ಪಂಚಾಯತದ ಒಟ್ಟು 9 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 7 ಸ್ಥಾನಗಳನ್ನು ಪಡೆಯುವಲ್ಲಿ ಯಶಸ್ವಿಯಾದ ಕಾಂಗ್ರೆಸ್ ಬೆಂಬಲಿತರು ಅಧಿಕಾರದ ಗದ್ದುಗೆಗೆ ಏರಿದ್ದಾರೆ. ಒಂದು ಸ್ಥಾನ ಬಿಜೆಪಿ ಬೆಂಬಲಿತ ಹಾಗೂ ಒಂದು ಸ್ಥಾನ ಎಸ್ಡಿಪಿಐ ಬೆಂಬಲಿತ ಅಭ್ಯರ್ಥಿಗಳು ಪಡೆದುಕೊಂಡಿದ್ದರು
ಅಧ್ಯಕ್ಷ ಗಾದಿಗೆ ಹಿಂದುಳಿದ ವರ್ಗ ಎ ಮೀಸಲಾತಿ ನಿಗದಿಯಾಗಿದ್ದು, ತೆಕ್ಕಾರು ವಾರ್ಡ್-3 ರಲ್ಲಿ ಸ್ಪರ್ಧಿಸಿ ಆಯ್ಕೆಯಾಗಿದ್ದ ಅಬ್ದುಲ್ ರಝಾಕ್ ರವರು ಅಧ್ಯಕ್ಷ ಸ್ಥಾನಕ್ಕೆ ಹಾಗೂ ತೆಕ್ಕಾರು ವಾರ್ಡ್-3ರಲ್ಲಿ ಸ್ಪರ್ಧಿಸಿ ಆಯ್ಕೆಯಾಗಿದ್ದ ಶ್ರೀಮತಿ ಪುಷ್ಪಾ ಕೆ ರವರು ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿ ಅವಿರೊಧವಾಗಿ ಆಯ್ಕೆಯಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.