ಸುಲ್ಕೇರಿ ಗ್ರಾ.ಪಂ ಅಧ್ಯಕ್ಷರಾಗಿ ನಾರಾಯಣ, ಉಪಾಧ್ಯಕ್ಷರಾಗಿ ಯಶೋಧಾ ಅವಿರೋಧ ಆಯ್ಕೆ

ಸುಲ್ಕೇರಿ: ಸುಲ್ಕೇರಿ ಗ್ರಾಮ ಪಂಚಾಯತದ ನೂತನ ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಯಶೋಧಾ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸುಲ್ಕೇರಿ ಗ್ರಾ.ಪಂನಲ್ಲಿ ಫೆ.11 ರಂದು ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬೆಳ್ತಂಗಡಿ ಪಶು ಸಂಗೋಪಣಾ ಇಲಾಖೆಯ ಸಹಾಯಕ ನಿರ್ದೇಶಕರು ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ, ಗ್ರಾ.ಪಂ ಸದಸ್ಯರು, ಗ್ರಾ.ಪಂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸುಲ್ಕೇರಿ ಗ್ರಾಮ ಪಂಚಾಯತ್‌ನ 7 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 7 ಸ್ಥಾನಗಳನ್ನೂ ಪಡೆದುಕೊಂಡು ಪಂಚಾಯತದ ಅಧಿಕಾರವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು.
ಸುಲ್ಕೇರಿ ಗ್ರಾಮ ಪಂಚಾಯತದಲ್ಲಿ ಅಧ್ಯಕ್ಷ ಗಾದಿಗೆ ಹಿಂದುಳಿದ ವರ್ಗ ಎ ಮೀಸಲಾತಿ ನಿಗದಿಯಾಗಿದ್ದು, ಸುಲ್ಕೇರಿ ವಾರ್ಡ್-1 ರಲ್ಲಿ ಸ್ಪರ್ಧಿಸಿ ಆಯ್ಕೆಯಾಗಿದ್ದ ನಾರಾಯಣ ಪೂಜಾರಿ ರವರು ಅಧ್ಯಕ್ಷ ಸ್ಥಾನಕ್ಕೆ ಹಾಗೂ ಕುದ್ಯಾಡಿ ಕ್ಷೇತ್ರದಿಂದ ಆಯ್ಕೆಯಾದ ಶ್ರೀಮತಿ ಯಶೋಧಾ ರವರು ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.