ನಡ: ನಡ ಗ್ರಾಮ ಪಂಚಾಯತದ ನೂತನ ಅಧ್ಯಕ್ಷರಾಗಿ ವಿಜಯ ಗೌಡ ಹಾಗೂ ಉಪಾಧ್ಯಕ್ಷರಾಗಿ ವಿನುತಾ ಆರ್ ಶೆಟ್ಟಿ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಡ ಗ್ರಾಮ ಪಂಚಾಯತದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಗಾದಿಗೆ ಹಿಂದುಳಿದ ವರ್ಗ ಬಿ ಮಹಿಳೆ ಸ್ಥಾನ ಮೀಸಲಾತಿ ನಿಗದಿಯಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ವಿಜಯ ಗೌಡ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ವಿನುತಾ ಆರ್ ಶೆಟ್ಟಿ ರವರು ನಾಮಪತ್ರ ಸಲ್ಲಿಸಿ ಅವಿರೋಧ ಆಯ್ಕೆಯಾಗಿದ್ದಾರೆ.
ಫೆ.11 ರಂದು ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಸಹಾಯಕ ಕೃಷಿ ಅಧಿಕಾರಿ ಹುಮೇರಾ ಜಬೀನ್ ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ಗ್ರಾ.ಪಂ ನೂತನ ಸದಸ್ಯರು, ಗ್ರಾ.ಪಂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ನಡ ಗ್ರಾಮ ಪಂಚಾಯತ್ನ14 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ೧೦ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು,1 ಪಕ್ಷೇತರ ಹಾಗೂ 3 ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿದ್ದರು.