ಬಂಗರ ಪಲ್ಕೆ ಗುಡ್ಡ ಕುಸಿತ ಪ್ರಕರಣ: ಘಟನಾ ಸ್ಥಳಕ್ಕೆ ಭೇಟಿ ನೀಡಿದ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಎಳನೀರು ಸಮೀಪದ ಬಂಗರ ಪಲ್ಕೆಯಲ್ಲಿ  ಗುಡ್ಡ ಕುಸಿತಗೊಂಡಿರುವ ಸ್ಥಳಕ್ಕೆ ಗುರುವಾರ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಭೇಟಿ ನೀಡಿದ್ದಾರೆ.
ಈಗಾಗಲೇ ದುರ್ಘಟನೆ ನಡೆದು 18 ದಿನ ಕಳೆದಿದ್ದು,  ಯುವಕನ ದೇಹ ಪತ್ತೆಯಾಗದ ಹಿನ್ನೆಲೆ ಫೆ.11ರಂದು ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ  ಅಧಿಕಾರಿ ವರ್ಗ ಸ್ಥಳ ಪರಿಶೀಲನೆ ನಡೆಸಿ ಸ್ಥಳೀಯರು, ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವ ಅಧಿಕಾರಿಗಳೊಂದಿಗೆ ಘಟನೆ ಅನಂತರ ಬೆಳವಣಿಗೆ ಕುರಿತು ಚರ್ಚೆ ನಡೆಸಿದಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡುವುದಕ್ಕೂ ಮುನ್ನ ಜಿಲ್ಲಾಧಿಕಾರಿ ಡಾ.ರಾಜೇಂದ್ರ ನಾಪತ್ತೆಯಾದ ಯುವಕ ಸನತ್ ಶೆಟ್ಟಿ ನಿವಾಸಕ್ಕೆ ತೆರಳಿ  ಪೋಷಕರಿಗೆ ಹಾಗೂ ಕುಟುಂಬದವರಿಗೆ ಸಾಂತ್ವನ ಹೇಳಿದ್ದು, ನಮ್ಮ ಶಕ್ತಿ ಮೀರಿ ಕಾರ್ಯಾಚರೆಣೆ ನಡೆಸುತ್ತೇವೆ ಎಂದು ಭರವಸೆಯ ನುಡಿಗಳನ್ನಾಡಿದರು. ಅಲ್ಲದೇ ಘಟನಾ ಸ್ಥಳದಲ್ಲಿ ಕುಸಿದಿರುವ ಗುಡ್ಡ ಕುಸಿತ ತೆರವು ಕಾರ್ಯಾಚರಣೆ ಮುಂದುವರೆದಿದ್ದು, ಸರಕಾರಿ ಸಿಬ್ಬಂದಿ, ಇಲಾಖಾ ಸಿಬ್ಬಂದಿ ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ನಡೆಯುತ್ತಿದೆ. ಅಗತ್ಯ ಬಿದ್ದಲ್ಲಿ ಎಲ್ಲ ರೀತಿಯ ಸಹಕಾರ ಹಾಗೂ ಸಹಾಯ ಹಸ್ತವನ್ನು ಒದಗಿಸಿ ಕೊಡಲು ಜಿಲ್ಲಾಡಳಿತ ಸಿದ್ಧವಿದ್ದು, ಪೋಷಕರಾದ ನೀವು ಮನಸ್ಥೈರ್ಯವನ್ನು ಕಳೆದುಕೊಳ್ಳಬೇಡಿ , ಧೈರ್ಯದಿಂದ ಇರಬೇಕು ಎಂದು ಸಮಾಧಾನ ಮಾತುಗಳನ್ನಾಡಿದರು.

 

ಕಾರ್ಯಾಚಾರಣೆ ಸ್ಥಗಿತಗೊಳ್ಳಿಸುವ ನಿರ್ಧಾರ

ಕಳೆದ 18 ದಿನಗಳಿಂದ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, ಇಲ್ಲಿಯವರೆಗೆ ಯಾವುದೇ ಸುಳಿವು ದೊರೆತಿಲ್ಲ. ಅಲ್ಲದೇ ಈಗಾಗಲೇ ಸಾಕಷ್ಟು ಪ್ರಯತ್ನಗಳು, ಕೆಲಸಗಳು ನಡೆದಿದ್ದು, ಸರಕಾರ, ಜಿಲ್ಲಾಡಳಿತ, ತಾಲೂಕೂ ಹಾಗೂ ಗ್ರಾಂ.ಪ ಸೇರಿದಂತ ಸಾರ್ವಜನಿಕರು ಶ್ರಮವಹಿಸಿ ಕೆಲಸ ಮಾಡಿದ್ದಾರೆ. ಇಷ್ಟು ಕೆಲಸ ಕಾರ್ಯಗಳು ನಡೆದಿದ್ದರೂ ಯಾವುದೇ ಸುಳಿವು ಸಿಗದ ಕಾರಣ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವ ದೃಢ ನಿರ್ಧಾರವನ್ನು ಮಾಡಬೇಕಾಗುತ್ತದೆ. ಈ ಕುರಿತು ಎಲ್ಲರೊಂದಿಗೆ ಚರ್ಚೆ ಹಾಗೂ ಸಮಾಲೋಚನೆ ನಡೆಸಿ ತಿಳಿಸುತ್ತೇವೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಹೇಳಿದ್ದಾರೆ.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಬೆಳ್ತಂಗಡಿ ತಹಶೀಲ್ದಾರ್ ಮಹೇಶ್ ಜೆ., ಡಿ.ವೈ.ಎಸ್.ಪಿ. ವೆಲೆಂಟೈನ್ ಡಿಸೋಜ, ಸಹಾಯಕ ಆಯುಕ್ತ ಡಾ. ಯತೀಶ್ ಉಳ್ಳಾಲ್, ಬೆಳ್ತಂಗಡಿ ವೃತ್ತನಿರೀಕ್ಷಕ ಸಂದೇಶ್ ಪಿ.ಜಿ., ಮಲವಂತಿಗೆ ಗ್ರಾ.ಪಂ. ಅಧ್ಯಕ್ಷೆ ಅನಿತಾ, ಉಪಾಧ್ಯಕ್ಷ ದಿನೇಶ್ ಗೌಡ, ಸದಸ್ಯ ಪ್ರಕಾಶ್ ಕುಮಾರ್ ಜೈನ್, ಉಜಿರೆಯ ರವಿ ಚಕ್ಕಿತ್ತಾಯ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.