ಉಜಿರೆ: ಎಸ್.ಡಿ.ಎಂ. ಕಾಲೇಜಿನಲ್ಲಿ ‘ರಾಷ್ಟ್ರೀಯ ಶಿಕ್ಷಣ ನೀತಿ – ಅನುಷ್ಠಾನದ ಸವಾಲುಗಳು” ಕುರಿತು ವಿಚಾರ ಸಂಕೀರ್ಣ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆ: ಇಲ್ಲಿನ ಎಸ್.ಡಿ.ಎಂ. ಕಾಲೇಜಿನ ಆಶ್ರಯದಲ್ಲಿ  ‘ರಾಷ್ಟ್ರೀಯ ಶಿಕ್ಷಣ ನೀತಿ – ಅನುಷ್ಠಾನದ ಸವಾಲುಗಳು” ಎಂಬ ವಿಷಯದ ಬಗ್ಗೆ ಸಿದ್ಧವನ ಗುರುಕುಲದಲ್ಲಿ ಫೆ.12 ರಂದು  ವಿಚಾರ ಸಂಕಿರಣ ನಡೆಯಿತು.

ಧರ್ಮಸ್ಥಳದ ಶ್ರೀಮತಿ ಹೇಮಾವತಿ ವಿ.ಹೆಗ್ಗಡೆ ಯವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ ಯಶೋವರ್ಮ ಪ್ರಸ್ತಾವಿಕ ನುಡಿಗಳನ್ನಾಡಿದರು. ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಡಾ. ಎಸ್. ಸತೀಶ್ಚಂದ್ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ವಿಶ್ರಾಂತ ಕುಲಸಚಿವ ಪ್ರೊ. ಎ.ಎಂ, ನರಹರಿ ಇದ್ದರು.

ವಿಚಾರ ಸಂಕಿರಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಸವಾಲುಗಳ ವಿಷಯದ ಕುರಿತು ವಿಚಾರ ಸಂಕೀರ್ಣ ನಡೆಯಿತು.

ಕಾರ್ಯಕ್ರಮದಲ್ಲಿ ಬೆಳಾಲು ಶಾಲೆಯ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್, ಮಂಗಳೂರು ವಿ.ವಿ.ಯ ಪ್ರೊ. ರಾಜರಾಮ ತೋಳ್ಪಾಡಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಡಾ. ಬಿ.ಎ ಕುಮಾರ್ ಹೆಗ್ಡೆ ನಿರೂಪಿಸಿದರು, ಸಂಪತ್ ಕುಮಾರ್ ಸ್ವಾಗತಿಸಿದರು. ವಂದನಾರ್ಪಣೆಯನ್ನು ಮನೋಹರ್ ನಾಯಕ್ ಮಾಡಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.