ಮಡಂತ್ಯಾರು ಗ್ರಾ.ಪಂ ಅಧ್ಯಕ್ಷರಾಗಿ ಶಶಿಪ್ರಭಾ ಉಪಾಧ್ಯಕ್ಷರಾಗಿ ಸಂಗೀತಾ ಶೆಟ್ಟಿ ಅವಿರೋಧ ಆಯ್ಕೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮಡಂತ್ಯಾರು: ಮಡಂತ್ಯಾರು ಗ್ರಾಮ ಪಂಚಾಯತದ ನೂತನ ಅಧ್ಯಕ್ಷರಾಗಿ ಶ್ರೀಮತಿ ಶಶಿಪ್ರಭಾ ಹಾಗೂ ಉಪಾಧ್ಯಕ್ಷರಾಗಿ ಸಂಗೀತಾ ಶೆಟ್ಟಿ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಡಂತ್ಯಾರು ಗ್ರಾಮ ಪಂಚಾಯತದಲ್ಲಿ ಅಧ್ಯಕ್ಷ ಗಾದಿಗೆ ಪರಿಶಿಷ್ಟ ಪಂಗಡ ಮೀಸಲಾತಿ ನಿಗದಿಯಾಗಿದ್ದು, ಕುಕ್ಕಳ – 2ನೇ ವಾರ್ಡ್ ನಲ್ಲಿ ಪ.ಪಂಗಡ ಕ್ಷೇತ್ರದಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದ ಶಶಿಪ್ರಭಾ ರವರು ಅಧ್ಯಕ್ಷ ಸ್ಥಾನಕ್ಕೆ ಹಾಗೂ ಪಾರೆಂಕಿ ವಾರ್ಡ್-1ರಲ್ಲಿ ಹಿಂದುಳಿದ ವರ್ಗ ಬಿ ಮಹಿಳೆ ಕ್ಷೇತ್ರದಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದ ಶ್ರೀಮತಿ ಸಂಗೀತಾ ಶೆಟ್ಟಿ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿ ಅವಿರೊಧವಾಗಿ ಆಯ್ಕೆಯಾಗಿದ್ದಾರೆ.
ಮಡಂತ್ಯಾರು ಗ್ರಾ.ಪಂನಲ್ಲಿ ಫೆ.12 ರಂದು ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಉಜಿರೆ ಪಶು ಸಂಗೋಪಣಾ ಇಲಾಖೆಯ ಪಶುವೈದ್ಯಾಧಿಕಾರಿ ಎಸ್.ಯತೀಶ್ ಕುಮಾರ್ ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಕಾರ್ಯದರ್ಶಿ ಮೋರ್ಲಿನ್ ಕ್ರಿಸ್ತಿನ್ ಡಿ’ಸೋಜಾ, ಗ್ರಾ.ಪಂ ಸದಸ್ಯರು, ಗ್ರಾ.ಪಂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಮಡಂತ್ಯಾರು ಗ್ರಾಮ ಪಂಚಾಯತದ ಒಟ್ಟು 16 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ೧೩ ಸ್ಥಾನಗಳನ್ನು ಪಡೆದ ಬಿಜೆಪಿ ಬೆಂಬಲಿತರು ಅಧಿಕಾರದ ಗದ್ದುಗೆಗೆ ಏರಿದ್ದಾರೆ. ೩ ಸ್ಥಾನಗಳು ಎಸ್ಡಿಪಿಐ ಬೆಂಬಲಿತರ ಪಾಲಾಗಿತ್ತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.