ಬಳಂಜ ಗ್ರಾ.ಪಂ ಅಧ್ಯಕ್ಷರಾಗಿ ಹೇಮಂತ್ ಪೂಜಾರಿ ಉಪಾಧ್ಯಕ್ಷರಾಗಿ ಬೇಬಿ ಅವಿರೋಧ ಆಯ್ಕೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬಳಂಜ: ಬಳಂಜ ಗ್ರಾಮ ಪಂಚಾಯತದ ನೂತನ ಅಧ್ಯಕ್ಷರಾಗಿ ಹೇಮಂತ ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಬೇಬಿ ನಾರಾಯಣ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಳಂಜ ಗ್ರಾಮ ಪಂಚಾಯತದಲ್ಲಿ ಅಧ್ಯಕ್ಷ ಗಾದಿಗೆ ಸಾಮಾನ್ಯ ಸ್ಥಾನ ಮೀಸಲಾತಿ ನಿಗದಿಯಾಗಿದ್ದು, ತೆಂಕಕಾರಂದೂರು 1ನೇ ವಾರ್ಡ್‌ನಲ್ಲಿ ಸ್ಪರ್ಧಿಸಿ ಆಯ್ಕೆಯಾಗಿದ್ದ ಹೇಮಂತ ಪೂಜಾರಿ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಬಳಂಜ 1ನೇ ವಾರ್ಡಿನಲ್ಲಿ ಪ.ಜಾತಿ ಮಹಿಳೆ ಮೀಸಲಾತಿಯಲ್ಲಿ ಸ್ಪರ್ಧಿಸಿ ಆಯ್ಕೆಯಾಗಿದ್ದ ಶ್ರೀಮತಿ ಬೇಬಿ ನಾರಾಯಣ ರವರು ಉಪಾಧ್ಯಕ್ಷೆ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿ ಅವಿರೊಧವಾಗಿ ಆಯ್ಕೆಯಾಗಿದ್ದಾರೆ.


ಬಳಂಜ ಗ್ರಾ.ಪಂನಲ್ಲಿ ಫೆ.12 ರಂದು ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ವೇಣೂರು ಪಶುಸಂಗೋಪಣಾ ಇಲಾಖೆಯ ಪಶು ವೈದ್ಯಾಧಿಕಾರಿ ಡಾ| ವಿನಯ ಕುಮಾರ್ ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ರಶ್ಮಿ ಬಿ.ಪಿ, ಕಾರ್ಯದರ್ಶಿ ಪ್ರಿಯಾ, ಗ್ರಾ.ಪಂ ನೂತನ ಸದಸ್ಯರು, ಗ್ರಾ.ಪಂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಬಳಂಜ ಗ್ರಾಮ ಪಂಚಾಯತದ ಒಟ್ಟು 13 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 11 ಸ್ಥಾನಗಳನ್ನು ಪಡೆದ ಬಿಜೆಪಿ ಬೆಂಬಲಿತರು ಅಧಿಕಾರ ಪಡೆಯುವಲ್ಲಿ ಯಶಸ್ವಿಯಾಗಿದ್ದು, ಕಾಂಗ್ರೆಸ್ ಬೆಂಬಲಿತರು-1 ಮತ್ತು ಎಸ್ಡಿಪಿಐ ಬೆಂಬಲಿತರು-1 ಸ್ಥಾನಗಳನ್ನಷ್ಟೇ ಪಡೆದುಕೊಂಡಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.