ಕಳೆಂಜ ಗ್ರಾ.ಪಂ ಅಧ್ಯಕ್ಷರಾಗಿ ಪ್ರಸನ್ನ ಎ.ಪಿ ಉಪಾಧ್ಯಕ್ಷರಾಗಿ ಗಿರಿಜಾ ಅವಿರೋಧ ಆಯ್ಕೆ

ಕಳೆಂಜ: ಕಳೆಂಜ ಗ್ರಾಮ ಪಂಚಾಯತದ ನೂತನ ಅಧ್ಯಕ್ಷರಾಗಿ ಪ್ರಸನ್ನ ಎ.ಪಿ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಗಿರಿಜಾ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಳೆಂಜ ಗ್ರಾಮ ಪಂಚಾಯತದಲ್ಲಿ ಅಧ್ಯಕ್ಷ ಗಾದಿಗೆ ಹಿಂದುಳಿದ ವರ್ಗ ಎ ಮೀಸಲಾತಿ ನಿಗದಿಯಾಗಿದ್ದು, ಕಳೆಂಜ 1ನೇ ವಾರ್ಡ್‌ನಲ್ಲಿ ಅದೇ ಮೀಸಲಾತಿಯಲ್ಲಿ ಸ್ಪರ್ಧಿಸಿ ಆಯ್ಕೆಯಾಗಿದ್ದ ಪ್ರಸನ್ನ ಎ.ಪಿ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಕಳೆಂಜ 1ನೇ ವಾರ್ಡಿನಲ್ಲಿ ಪ.ಜಾತಿ ಮಹಿಳೆ ಮೀಸಲಾತಿಯಲ್ಲಿ ಸ್ಪರ್ಧಿಸಿ ಆಯ್ಕೆಯಾಗಿದ್ದ ಶ್ರೀಮತಿ ಗೀತಾ ರವರು ಉಪಾಧ್ಯಕ್ಷೆ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಕಳೆಂಜ ಗ್ರಾ.ಪಂನಲ್ಲಿ ಫೆ.12 ರಂದು ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕೊಕ್ಕಡ ರೈತ ಸಂಪರ್ಕ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಚಿದಾನಂದ ಹೂಗಾರ್ ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಅಭಿನಯ, ಕಾರ್ಯದರ್ಶಿ ಹೊನ್ನಪ್ಪ ಗೌಡ, ಗ್ರಾ.ಪಂ ನೂತನ ಸದಸ್ಯರು, ಜಿ.ಪಂ ಸದಸ್ಯ ಕೊರಗಪ್ಪ ನಾಯ್ಕ್, ತಾ.ಪಂ. ಸದಸ್ಯೆ ಸುಶೀಲ, ಚುನಾವಣಾ ಉಸ್ತುವಾರಿ ಪ್ರೀತಮ್ ಧರ್ಮಸ್ಥಳ, ಗ್ರಾ.ಪಂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


ಕಳೆಂಜ ಗ್ರಾಮ ಪಂಚಾಯತದ ಒಟ್ಟು 13 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 11 ಸ್ಥಾನಗಳನ್ನು ಪಡೆದ ಬಿಜೆಪಿ ಬೆಂಬಲಿತರು ಅಧಿಕಾರ ಪಡೆಯುವಲ್ಲಿ ಯಶಸ್ವಿಯಾಗಿದ್ದು, ಕಾಂಗ್ರೆಸ್ ಬೆಂಬಲಿತರು-2 ಸ್ಥಾನಗಳನ್ನಷ್ಟೇ ಪಡೆದುಕೊಂಡಿದ್ದರು.

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.