ಕಾಶಿಪಟ್ಣ ಗ್ರಾ.ಪಂ ಅಧ್ಯಕ್ಷರಾಗಿ ಶಿಲ್ಪಾ ಉಪಾಧ್ಯಕ್ಷರಾಗಿ ಸತೀಶ್ ಕೆ ಅವಿರೋಧ ಆಯ್ಕೆ

ಕಾಶಿಪಟ್ಣ: ಕಾಶಿಪಟ್ಣ ಗ್ರಾಮ ಪಂಚಾಯತದ ನೂತನ ಅಧ್ಯಕ್ಷರಾಗಿ ಶ್ರೀಮತಿ ಶಿಲ್ಪಾ ಹಾಗೂ ಉಪಾಧ್ಯಕ್ಷರಾಗಿ ಸತೀಶ್ ಕೆ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಾಶಿಪಟ್ಣ ಗ್ರಾ.ಪಂ.ನಲ್ಲಿ ಫೆ.12 ರಂದು ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬೆಳ್ತಂಗಡಿ ಪಶು ಸಂಗೋಪಣಾ ಇಲಾಖೆಯ ಸಹಾಯಕ ನಿರ್ದೇಶಕ ರವಿ ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಆಶಾಲತಾ ಹೆಚ್, ಕಾರ್ಯದರ್ಶಿ ಲೀನಾ ಬೆನೆಡಿಕ್ಟ್ ಲೋಬೊ, ಗ್ರಾ.ಪಂ ಸದಸ್ಯರು, ಗ್ರಾ.ಪಂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


ಕಾಶಿಪಟ್ಣ ಗ್ರಾಮ ಪಂಚಾಯತದ ಒಟ್ಟು 7 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 4 ಸ್ಥಾನಗಳನ್ನು ಪಡೆದ ಕಾಂಗ್ರೆಸ್ ಬೆಂಬಲಿತರು ಅಧಿಕಾರದ ಗದ್ದುಗೆಗೆ ಏರಿದ್ದಾರೆ. 3 ಸ್ಥಾನಗಳು ಬಿಜೆಪಿ ಬೆಂಬಲಿತರ ಪಾಲಾಗಿದೆ.


ಕಾಶಿಪಟ್ಣ ಗ್ರಾಮ ಪಂಚಾಯತದಲ್ಲಿ ಅಧ್ಯಕ್ಷ ಗಾದಿಗೆ ಹಿಂದುಳಿದ ವರ್ಗ ಎ ಮಹಿಳಾ ಮೀಸಲಾತಿ ನಿಗದಿಯಾಗಿದ್ದು, ಕಾಶಿಪಟ್ಣ ವಾರ್ಡ್-1 ರಲ್ಲಿ ಅದೇ ಮೀಸಲಾತಿಲ್ಲಿ ಸ್ಪರ್ಧಿಸಿ ಆಯ್ಕೆಯಾಗಿದ್ದ ಶ್ರೀಮತಿ ಶಿಲ್ಪಾ ರವರು ಅಧ್ಯಕ್ಷ ಸ್ಥಾನಕ್ಕೆ ಹಾಗೂ ಕಾಶಿಪಟ್ಣ ವಾರ್ಡ್-೧ರಲ್ಲಿ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದ ಸತೀಶ್ ಕೆ ರವರು ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿ ಅವಿರೊಧವಾಗಿ ಆಯ್ಕೆಯಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.