ಕುವೆಟ್ಟು ಗ್ರಾ.ಪಂ ಅಧ್ಯಕ್ಷರಾಗಿ ಆಶಾಲತಾ ಉಪಾಧ್ಯಕ್ಷರಾಗಿ ಪ್ರದೀಪ್ ಶೆಟ್ಟಿ ಅವಿರೋಧ ಆಯ್ಕೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕುವೆಟ್ಟು: ಕುವೆಟ್ಟು ಗ್ರಾಮ ಪಂಚಾಯತದ ನೂತನ ಅಧ್ಯಕ್ಷರಾಗಿ ಶ್ರೀಮತಿ ಆಶಾಲತಾ ಹಾಗೂ ಉಪಾಧ್ಯಕ್ಷರಾಗಿ ಪ್ರದೀಪ್ ಶೆಟ್ಟಿ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕುವೆಟ್ಟು ಗ್ರಾಮ ಪಂಚಾಯತದಲ್ಲಿ ಅಧ್ಯಕ್ಷ ಗಾದಿಗೆ ಹಿಂದುಳಿದ ವರ್ಗ ಎ ಮಹಿಳೆ ಮೀಸಲಾತಿ ನಿಗದಿಯಾಗಿದ್ದು, ಕುವೆಟ್ಟು- 2ನೇ ವಾರ್ಡ್ ನಲ್ಲಿ ಕ್ಷೇತ್ರದಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದ ಆಶಾಲತಾ ರವರು ಅಧ್ಯಕ್ಷ ಸ್ಥಾನಕ್ಕೆ ಹಾಗೂ ಕುವೆಟ್ಟು ವಾರ್ಡ್-2ರಲ್ಲಿ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದ ಪ್ರದೀಪ್ ಶೆಟ್ಟಿ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿ ಅವಿರೊಧವಾಗಿ ಆಯ್ಕೆಯಾಗಿದ್ದಾರೆ.
ಕುವೆಟ್ಟು ಗ್ರಾ.ಪಂನಲ್ಲಿ ಫೆ.12 ರಂದು ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬೆಳ್ತಂಗಡಿ ತೋಟಗಾರಿಕಾ ಇಲಾಖೆಯ ಸಹಾಯಕ ತೋಟಗಾರಿಕಾ ನಿರ್ದೇಶಕ ಸಂಜೀವ ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಡಿ.ಪಿ, ಕಾರ್ಯದರ್ಶಿ ಸೇವಂತಿ, ಗ್ರಾ.ಪಂ ನೂತನ ಸದಸ್ಯರು, ಗ್ರಾ.ಪಂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಕುವೆಟ್ಟು ಗ್ರಾಮ ಪಂಚಾಯತದ ಒಟ್ಟು 25 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 19 ಸ್ಥಾನಗಳನ್ನು ಪಡೆದ ಬಿಜೆಪಿ ಬೆಂಬಲಿತರು ಅಧಿಕಾರದ ಗದ್ದುಗೆಗೆ ಏರಿದ್ದಾರೆ. 6 ಸ್ಥಾನಗಳನ್ನು ಎಸ್ಡಿಪಿಐ ಬೆಂಬಲಿತ ಅಭ್ಯರ್ಥಿಗಳು ಪಡೆದುಕೊಂಡಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.