ಕುಕ್ಕೇಡಿ ಗ್ರಾ.ಪಂ ಅಧ್ಯಕ್ಷರಾಗಿ ಜನಾರ್ದನ ಪೂಜಾರಿ ಉಪಾಧ್ಯಕ್ಷರಾಗಿ ಗೀತಾ ಎಂ ಅವಿರೋಧ ಆಯ್ಕೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕುಕ್ಕೇಡಿ: ಕುಕ್ಕೇಡಿ ಗ್ರಾಮ ಪಂಚಾಯತದ ನೂತನ ಅಧ್ಯಕ್ಷರಾಗಿ ಜನಾರ್ದನ ಹಾಗೂ ಉಪಾಧ್ಯಕ್ಷರಾಗಿ ಗೀತಾ ಎಂ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕುಕ್ಕೇಡಿ ಗ್ರಾಮ ಪಂಚಾಯತದಲ್ಲಿ ಅಧ್ಯಕ್ಷ ಗಾದಿಗೆ ಹಿಂದುಳಿದ ವರ್ಗ ಎ ಮೀಸಲಾತಿ ನಿಗದಿಯಾಗಿದ್ದು, ನಿಟ್ಟಡೆ – 2ನೇ ವಾರ್ಡ್ ನಲ್ಲಿ ಹಿಂದುಳಿದ ವರ್ಗ ಎ ಮೀಸಲಾತಿಯಲ್ಲಿ ಸ್ಪರ್ಧಿಸಿ ಆಯ್ಕೆಯಾಗಿದ್ದ ಜನಾರ್ದನ ಪೂಜಾರಿ ಅಧ್ಯಕ್ಷ ಸ್ಥಾನಕ್ಕೆ ಹಾಗೂ ನಿಟ್ಟಡೆ ವಾರ್ಡ್-2ರಲ್ಲಿ ಪ.ಪಂಗಡ ಮಹಿಳೆ ಮೀಸಲಾತಿಯಲ್ಲಿ ಸ್ಪರ್ಧಿಸಿ ಆಯ್ಕೆಯಾಗಿದ್ದ ಶ್ರೀಮತಿ ಗೀತಾರವರು ಉಪಾಧ್ಯಕ್ಷೆ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿ ಅವಿರೊಧವಾಗಿ ಆಯ್ಕೆಯಾಗಿದ್ದಾರೆ.


ಕುಕ್ಕೇಡಿ ಗ್ರಾ.ಪಂನಲ್ಲಿ ಫೆ.12 ರಂದು ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬೆಳ್ತಂಗಡಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಶಿವಪ್ರಸಾದ್ ಅಜಿಲ ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ನವೀನ್, ಗ್ರಾ.ಪಂ ನೂತನ ಸದಸ್ಯರು, ಗ್ರಾ.ಪಂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕುಕ್ಕೇಡಿ ಗ್ರಾಮ ಪಂಚಾಯತದ ಒಟ್ಟು 11 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 8 ಸ್ಥಾನಗಳನ್ನು ಪಡೆದ ಬಿಜೆಪಿ ಬೆಂಬಲಿತರು ಅಧಿಕಾರ ಪಡೆಯುವಲ್ಲಿ ಯಶಸ್ವಿಯಾಗಿದ್ದು, ಕೇವಲ3 ಸ್ಥಾನಗಳನ್ನಷ್ಟೇ ಕಾಂಗ್ರೆಸ್ ಬೆಂಬಲಿತರು ಪಡೆದುಕೊಂಡಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.