ನಾವೂರು ಗ್ರಾ.ಪಂ.: ಅಧ್ಯಕ್ಷರಾಗಿ ಗಣೇಶ್ ಎನ್, ಉಪಾಧ್ಯಕ್ಷರಾಗಿ ಸುನಂದ ಆಯ್ಕೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ನಾವೂರು: ನಾವೂರು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಗಣೇಶ್ ಎನ್, ಉಪಾಧ್ಯಕ್ಷೆಯಾಗಿ ಸುನಂದ ಆಯ್ಕೆಯಾಗಿದ್ದಾರೆ.

ಒಟ್ಟು 8 ಸ್ಥಾನಗಳಿಗೆ ಚುನಾವಣೆ ನಡೆದಿದ್ದು,  6 ಸ್ಥಾನವನ್ನು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಪಡೆದು ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ನಾವೂರು ಕ್ಷೇತ್ರದಿಂದ ಸ್ಪರ್ಧಿಸಿ ಚುನಾಯಿತರಾದ ಗಣೇಶ್ ಎನ್ ಸಾಮಾನ್ಯ ಮೀಸಲಾತಿಯಲ್ಲಿ ನಾಮಪತ್ರ ಸಲ್ಲಿಸಿ ಅಧ್ಯಕ್ಷರಾಗಿದ್ದಾರೆ. ಸುನಂದ ಪ.ಜಾತಿ ಮಹಿಳಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.

ಬೆಳ್ತಂಗಡಿ ಕೃಷಿ ಇಲಾಖೆಯ ಸಹಾಯಕ ಕೃಷಿ ಅಧಿಕಾರಿ ಹುಮೇರ ಜಬೀನ್ ರವರು ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟಿದ್ದು,  ಈ ಸಂದರ್ಭದಲ್ಲಿ ಗ್ರಾ. ಪಂ. ಅಭಿವೃದ್ಧಿ  ಅಧಿಕಾರಿ ವೆಂಕಟ ಕೃಷ್ಣ, ಕಾರ್ಯದರ್ಶಿ ಮೋನಮ್ಮ, ಪಂಚಾಯತ್ ನ  ನೂತನ ಸದಸ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.