ಕಣಿಯೂರು: ಕಣಿಯೂರು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷೆಯಾಗಿ ಗಾಯತ್ರಿ, ಉಪಾಧ್ಯಕ್ಷರಾಗಿ ಮಾಜಿ ಅಧ್ಯಕ್ಷ ಸುನೀಲ್ ಸಾಲಿಯಾನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಣಿಯೂರು ಗ್ರಾಮ ಪಂಚಾಯತ್ ನಲ್ಲಿ ಫೆ.12 ರಂದು ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಆಡಳಿತಾಧಿಕಾರಿ ಕಾರ್ತಿಕ್ ರವರು ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉತ್ತಮ ಚ. ಬನಸೋಡೆ, ಗ್ರಾ.ಪಂ ನೂತನ ಸದಸ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕಣಿಯೂರು ಗ್ರಾ.ಪಂ ನ 20 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 18 ಸ್ಥಾನವನ್ನು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಪಡೆದು ಅಧಿಕಾರ ಗದ್ದುಗೆಯನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಬೆಂಬಲಿತರು ಕೇವಲ 2 ಸ್ಥಾನವನ್ನಷ್ಟೇ ಪಡೆಯುವಲ್ಲಿ ಸಫಲರಾಗಿದ್ದರು.
ಕಣಿಯೂರು 3ನೇ ಕ್ಷೇತ್ರದಿಂದ ಸ್ಪರ್ಧಿಸಿ ಚುನಾಯಿತರಾದ ಗಾಯತ್ರಿ ಹಿಂದುಳಿದ ವರ್ಗ ಬಿ ಮಹಿಳಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿ ಅಧ್ಯಕ್ಷರಾಗಿ ಹಾಗೂ ಉರುವಾಲು 2ನೇ ಕ್ಷೇತ್ರದಿಂದ ಸ್ಪರ್ಧಿಸಿ ಚುನಾಯಿತರಾದ ಸುನೀಲ್ ಸಾಲ್ಯಾನ್ ಹಿಂದುಳಿದ ವರ್ಗ ಬಿ ಮೀಸಲಾತಿಯಲ್ಲಿ ನಾಮಪತ್ರ ಸಲ್ಲಿಸಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.