ಬಾರ್ಯ: ಬಾರ್ಯ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷೆಯಾಗಿ ಉಷಾ ಶರತ್, ಉಪಾಧ್ಯಕ್ಷರಾಗಿ ಪಿ.ಕೆ ಉಸ್ಮಾನ್ ಆಯ್ಕೆಯಾಗಿದ್ದಾರೆ.
ಒಟ್ಟು 17 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಆ ಪೈಕಿ 12 ಸ್ಥಾನವನ್ನು ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಗಳು ಪಡೆದು ಅಧಿಕಾರ ಚುಕ್ಕಾಣಿ ಹಿಡಿದಿದ್ದಾರೆ. ಉಳಿದ 4 ಸ್ಥಾನ ಬಿಜೆಪಿ ಬೆಂಬಲಿತರ ಪಾಲಾಗಿದ್ದರೆ, ಪಕ್ಷೇತರ ಬೆಂಬಲಿತರು 1 ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಬಾರ್ಯ 1ನೇ ಕ್ಷೇತ್ರದಿಂದ ಸ್ಪರ್ಧಿಸಿ ಚುನಾಯಿತರಾದ ಉಷಾ ಶರತ್ ಸಾಮಾನ್ಯ ಮಹಿಳಾ ಮೀಸಲಾತಿ ಅಡಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಹಾಗೂ, ಪುತ್ತಿಲ 2ನೇ ಕ್ಷೇತ್ರದಿಂದ ಸ್ಪರ್ಧಿಸಿ ಚುನಾಯಿತರಾದ ಪಿ.ಕೆ ಉಸ್ಮಾನ್ ಸಾಮನ್ಯ ಮೀಸಲಾತಿಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕೃಷಿ ಇಲಾಖಾ ಸಹಾಯಕ ನಿರ್ದೇಶಕ ರಂಜಿತ್ ರವರು ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟಿದ್ದು, ಈ ಸಂದರ್ಭದಲ್ಲಿ ಪಂ.ಅ. ಅಧಿಕಾರಿ ಪೂರ್ಣಿಮಾ, ಪಂಚಾಯತ್ ನ ಸದಸ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.