ಮೇಲಂತಬೆಟ್ಟು ಗ್ರಾ.ಪಂ ಅಧ್ಯಕ್ಷರಾಗಿ ಹರಿಣಾಕ್ಷಿ ಉಪಾಧ್ಯಕ್ಷರಾಗಿ ಸವಿತಾ ಅವಿರೋಧ ಆಯ್ಕೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮೇಲಂತಬೆಟ್ಟು: ಮೇಲಂತಬೆಟ್ಟು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷೆಯಾಗಿ ಹರಿಣಾಕ್ಷಿ, ಉಪಾಧ್ಯಕ್ಷರಾಗಿ ಶ್ರೀಮತಿ ಸವಿತಾ ಮುಂಡೂರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮೇಲಂತಬೆಟ್ಟು ಗ್ರಾಮ ಪಂಚಾಯತ್‌ನಲ್ಲಿ ಫೆ.12 ರಂದು ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬೆಳ್ತಂಗಡಿ ತಾ.ಪಂ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕಿ ತಾರಕೇಸರಿ ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೀತಾ, ಕಾರ್ಯದರ್ಶಿ ನಿರ್ಮಲ್ ಕುಮಾರ್, ಗ್ರಾ.ಪಂ ನೂತನ ಸದಸ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಮೇಲಂತಬೆಟ್ಟು ಗ್ರಾ.ಪಂನ 12 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 10 ಸ್ಥಾನವನ್ನು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಪಡೆದು ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಕಾಂಗ್ರೆಸ್ ಬೆಂಬಲಿತರು ಕೇವಲ 2 ಸ್ಥಾನವನ್ನಷ್ಟೇ ಪಡೆಯುವಲ್ಲಿ ಸಫಲರಾಗಿದ್ದರು.
ಮೇಲಂತಬೆಟ್ಟು ಕ್ಷೇತ್ರದಿಂದ ಸ್ಪರ್ಧಿಸಿ ಚುನಾಯಿತರಾದ ಹರಿಣಾಕ್ಷಿ ಪ.ಜಾತಿ ಮಹಿಳಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿ ಅಧ್ಯಕ್ಷರಾಗಿ ಹಾಗೂ ಮುಂಡೂರು ಕ್ಷೇತ್ರದಿಂದ ಸ್ಪರ್ಧಿಸಿ ಚುನಾಯಿತರಾದ ಶ್ರೀಮತಿ ಸವಿತಾ ಹಿಂದುಳಿದ ವರ್ಗ ಎ ಮಹಿಳಾ ಮೀಸಲಾತಿಯಲ್ಲಿ ನಾಮಪತ್ರ ಸಲ್ಲಿಸಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.