ಪುದುವೆಟ್ಟು ಗ್ರಾ.ಪಂ ಅಧ್ಯಕ್ಷರಾಗಿ ಯಶವಂತ ಡಿ, ಉಪಾಧ್ಯಕ್ಷರಾಗಿ ರೇಣುಕಾ ಅವಿರೋಧ ಆಯ್ಕೆ

ಪುದುವೆಟ್ಟು: ಪುದುವೆಟ್ಟು ಗ್ರಾಮ ಪಂಚಾಯತ್‌ನ ನೂತನ ಅಧ್ಯಕ್ಷರಾಗಿ ಯಶವಂತ ಡಿ, ಉಪಾಧ್ಯಕ್ಷರಾಗಿ ಶ್ರೀಮತಿ ರೇಣುಕಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪುದುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಫೆ.12 ರಂದು ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬೆಳ್ತಂಗಡಿ ಸಿಡಿಪಿಒ ಪ್ರಿಯಾ ಆಗ್ನೇಸ್ ರವರು ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ರಾಜು, ಕಾರ್ಯದರ್ಶಿ ಸರೋಜಿನಿ, ಪಂಚಾಯತ್‌ನ ನೂತನ ಸದಸ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


ಪುದುವೆಟ್ಟು ಗ್ರಾ.ಪಂ ನ 9 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 9 ಸ್ಥಾನಗಳನ್ನೂ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಪಡೆದು ಅಧಿಕಾರ ಗದ್ದುಗೆಯನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಪುದುವೆಟ್ಟು 1ನೇ ಕ್ಷೇತ್ರದಿಂದ ಸ್ಪರ್ಧಿಸಿ ಚುನಾಯಿತರಾದ ಯಶವಂತ.ಡಿ ರವರು ಅಧ್ಯಕ್ಷ ಮೀಸಲಾತಿಗೆ ನಿಗದಿಯಾದ ಸಾಮಾನ್ಯ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿ ಅಧ್ಯಕ್ಷರಾಗಿದ್ದಾರೆ. ಪುದುವೆಟ್ಟು 1ನೇ ಕ್ಷೇತ್ರದಿಂದ ಸ್ಪರ್ಧಿಸಿ ಚುನಾಯಿತರಾದ ರೇಣುಕಾ ಹಿಂದುಳಿದ ವರ್ಗ ಎ ಮೀಸಲಾತಿಯಲ್ಲಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.