ಬಳಂಜ:ಕೃಷಿಯಲ್ಲಿ ಸಾಧನೆ ಮಾಡಿದ ಅನಿಲ್ ಬಳಂಜ ಅವರಿಗೆ ತೋಟಗಾರಿಕೆ ರೈತ ರತ್ನ ರಾಜ್ಯ ಪ್ರಶಸ್ತಿ ಲಭಿಸಿದೆ.
ನಾಲ್ಕೂರು ಗ್ರಾಮದ ಡೆಂಜೋಳಿ ಸಮೀಪ ಸುಮಾರು 25 ಎಕ್ರೆ ತನ್ನ ಸ್ವಂತ ಭೂಮಿಯಲ್ಲಿ ದೇಶಿ ಹಾಗೂ ವಿದೇಶಿಯ ಬರೊಬ್ಬರಿ 800 ಕ್ಕೂ ಹೆಚ್ಚು ತಳಿಯ ಹಣ್ಣುಗಳನ್ನು ಬೆಳೆದು ಇತರರಿಗೆ ಮಾದರಿಯಾಗಿದ್ದಾರೆ.
ಇವರ ಈ ಸಾಧನೆಯನ್ನು ಕನ್ನಡ ಪ್ರಭ- ಏಷ್ಯಾನೆಟ್ ಸುವರ್ಣ ನ್ಯೂಸ್ ಗುರುತಿಸಿ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರವರು, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು, ಕೃಷಿ ಸಚಿವ ಬಿ.ಸಿ ಪಾಟೀಲ್ ರೈತ ರತ್ನ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
ಈ ಸಂದರ್ಭದಲ್ಲಿ ಕನ್ನಡ ಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ ಸಿಇಒ ಅಭಿನವ್, ಏಷ್ಯಾನೆಟ್ ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕರ್ ಉಪಸ್ಥಿತರಿದ್ದರು.