ಧರ್ಮಸ್ಥಳದಲ್ಲಿ ರಾಜ್ಯ ಮಟ್ಟದ ಅಂಚೆ ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1


ಧರ್ಮಸ್ಥಳ: 18ನೇ ರಾಜ್ಯ ಮಟ್ಟದ ಅಂಚೆ ಕುಂಚ ಸ್ಪರ್ಧೆಯಲ್ಲಿ ಸ್ಪರ್ಧಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪುರಸ್ಕಾರ ಸಮಾರಂಭವು ಫೆ.13 ರಂದು ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಜರುಗಿತು.


ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಖ್ಯಾತ ಚಲನಚಿತ್ರ ನಟ ‘ಕರ್ನಾಟಕ ಕಲಾಶ್ರೀ’ ಡಾ. ಶ್ರೀಧರ್ ಅಂಚೆಕುಂಚ ಸ್ಪರ್ಧಾ ವಿಜೇತರನ್ನು ಪುರಸ್ಕರಿಸಿ, ಶುಭ ಶಂಸನೆಗೈದರು.


ಶ್ರೀ ಕ್ಷೇತ್ರ ಧರ್ಮಸ್ಥಳ ಶಾಂತಿವನ ಟ್ರಸ್ಸ್ ನ ಟ್ರಸ್ಡಿಗಳಾದ ಹೇಮಾವತಿ ವಿ ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್, ಟ್ರಸ್ಟ್ ಕಾರ್ಯದರ್ಶಿ ಬಿ ಸೀತಾರಾಮ ತೋಳ್ಪಾಡಿತ್ತಾಯ, ನಿರ್ದೇಶಕ ಡಾ| ಶಶಿಕಾಂತ್ ಜೈನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಪುರಸ್ಕೃತ ಬೆಂಗಳೂರಿನ ಚಿತ್ರಕಲಾವಿದ ಬಾಗೂರು ಮಾರ್ಕಾಂಡೇಯ ಹಾಗೂ ಮಂಗಳೂರು ಸನಾತನ ನಾಟ್ಯಾಲಯದ ಚಂದ್ರಶೇಖರ್ ಮತ್ತು ಶೀಲಾ ದಿವಾಕರ್ ರವರಿಂದ ಕುಂಚ-ಗಾನ-ನೃತ್ಯ ವೈಭವ ನಡೆಯಿತು.

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.