
ಕೊಕ್ರಾಡಿ: ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕೊಕ್ರಾಡಿ ಶಾಖೆಯ ಪೊನ್ನೆಜಾಲ್ ನೂತನ ಕಟ್ಟಡ “ಸಮನ್ವಯ” ವಾಣಿಜ್ಯ ಸಂಕೀರ್ಣ ಹಾಗೂ ಬ್ಯಾಂಕಿಂಗ್ ಕಛೇರಿಯ ಉದ್ಘಾಟನೆ ಫೆ.15 ರಂದು ನಡೆಯಿತು.
ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್ ರಾಜೇಂದ್ರ ಕುಮಾರ್ ರವರು ನೂತನ ಕಟ್ಟಡ ಉದ್ಘಾಟನೆಯನ್ನು ನೆರವೇರಿಸಿ ಶುಭ ಹಾರೈಸಿದರು.
ಶಾಸಕ ಹರೀಶ್ ಪೂಂಜ,ವಿಧಾನ ಪರಿಷತ್ ಸದಸ್ಯರುಗಳಾದ ಹರೀಶ್ ಕುಮಾರ್, ಪ್ರತಾಪ್ಸಿಂಹ ನಾಯಕ್, ನಾರಾವಿ ಗ್ರಾ .ಪಂ ಅಧ್ಯಕ್ಷೆ ಆಶಾಲತಾ ಎಂ, ಉಪಾಧ್ಯಕ್ಷ ಉದಯ ಹೆಗ್ಡೆ, ಸುಲ್ಕೇರಿ ಗ್ರಾ.ಪಂ ಅಧ್ಯಕ್ಷ ನಾರಾಯಣ ಪೂಜಾರಿ, ಸಹಕಾರ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸುಕನ್ಯ ರಾವ್ , ವಿಜಯ ಕುಮಾರ್ ವೇದಿಕೆಯಲ್ಲಿ ಗೌರವ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್ ರಾಜೇಂದ್ರ ಕುಮಾರ್, ಶಾಸಕ ಹರೀಶ್ ಪೂಂಜ, ಎಂ.ಎಲ್.ಸಿ ಪ್ರತಾಪ್ ಸಿಂಹ ನಾಯಕ್ ರವರನ್ನು ಸನ್ಮಾನಿಸಿ ಗೌರವಿಸಲಾಯಿತು.
ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎನ್ ಸುಧಾಕರ ಭಂಡಾರಿ, ಉಪಾಧ್ಯಕ್ಷ ಸದಾನಂದ ಗೌಡ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್ ಶಶಿಕಾಂತ್ ಜೈನ್ ಹಾಗೂ ನಿರ್ದೇಶಕರುಗಳು, ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.