ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕರ್ನಾಟಕ ಶಾಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಶಂಭುಲಿಂಗನ ಗೌಡ ಪಾಟೀಲ,ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ,ಕೋಶಾಧಿಕಾರಿ ಸುರೇಶ್ ಶಡಷ್ಯಾಳ,ಕೊಪ್ಪಳ ಜಿಲ್ಲಾಧ್ಯಕ್ಷರಾದ ಶರಣ ಬಸವಣ ಗೌಡ,ಚಿಕ್ಕೋಡಿ ಜಿಲ್ಲಾಧ್ಯಕ್ಷರಾದ ಲೋಕಣ್ಣನವರು,ಉಡುಪಿ ಜಿಲ್ಲಾಧ್ಯಕ್ಷರಾದ ಶ್ರೀ ದಿನಕರ ಶೆಟ್ಟಿ ಇವರು ಫೆ.14ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು.
ಇದೇ ವೇಳೆ ಶ್ರೀ ಕ್ಷೇತ್ರ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ದಕ್ಷಿಣ ಜಿಲ್ಲಾ ಘಟಕದ ಕಾರ್ಯದರ್ಶಿ ಶ್ರೀ ವಿಮಲ್ ನೆಲ್ಯಾಡಿ,ಕೋಶಾಧಿಕಾರಿ ರಾಜೇಶ್ ನೆಲ್ಯಾಡಿ ,ಸಹಕಾರ್ಯದರ್ಶಿ ಅಮಿತಾನಂದ ಹೆಗ್ಡೆ,ಮೂಡಬಿದರೆ ತಾಲೂಕು ಅಧ್ಯಕ್ಷರಾದ ಶ್ರೀ ನಾಗೇಶ್ ಬೆಳ್ತಂಗಡಿ ತಾಲೂಕು ಕಾರ್ಯದರ್ಶಿ ಸುರೇಶ್ ಮಾಚಾರ್,ಉಪಾಧ್ಯಕ್ಷರಾದ ಕಿರಣ್ ಕುಮಾರ್ ಕೆ.ಎಸ್ ,ಖಜಾಂಚಿ ಲೋಕೇಶ ಜಿ ಮತ್ತು ಸಹಕಾರ್ಯದರ್ಶಿ ಶ್ರೀಮತಿ ಜ್ಯೋತಿ ಎಂ.ಎಸ್ ಹಾಜರಿದ್ದರು.