ಬಂದಾರು ಗ್ರಾ.ಪಂ.ಅಧ್ಯಕ್ಷರಾಗಿ ಪರಮೇಶ್ವರಿ, ಉಪಾಧ್ಯಕ್ಷರಾಗಿ ಗಂಗಾಧರ ಅವಿರೋಧ ಆಯ್ಕೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬಂದಾರು: ಬಂದಾರು ಗ್ರಾಮ ಪಂಚಾಯತ್‌ನ ನೂತನ ಅಧ್ಯಕ್ಷರಾಗಿ ಪರಮೇಶ್ವರಿ ಉಪಾಧ್ಯಕ್ಷರಾಗಿ ಗಂಗಾಧರ ಅವಿರೋಧ ಆಯ್ಕೆಯಾಗಿದ್ದಾರೆ.
ಒಟ್ಟು 16 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 16 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ.
ಬಂದಾರು 2ನೇ ಕ್ಷೇತ್ರದಿಂದ ಸ್ಪರ್ಧಿಸಿ ಚುನಾಯಿತರಾದ ಶ್ರೀಮತಿ ಪರಮೇಶ್ವರಿ ರವರು ಸಾಮಾನ್ಯ ಮಹಿಳೆ ಮೀಸಲಾತಿಯಲ್ಲಿ ನಾಮಪತ್ರ ಸಲ್ಲಿಸಿ ಅಧ್ಯಕ್ಷರಾಗಿದ್ದಾರೆ. ಮೊಗ್ರು 1ನೇ ವಾರ್ಡಿನಿಂದ ಚುನಾಯಿತರಾದ ಗಂಗಾಧರ ರವರು ಹಿಂದುಳಿದ ವರ್ಗ ಎ ಮೀಸಲಾತಿಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಜಿರೆ ಪಶುಸಂಗೋಪಣಾ ಇಲಾಖೆಯ ಪಶು ವೈದ್ಯಾಧಿಕಾರಿ ಡಾ| ಕಾರ್ತಿಕ್ ರವರು ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟಿದ್ದು,ಈ ಸಂದರ್ಭದಲ್ಲಿ ಗ್ರಾ.ಪಂ. ಅಭಿವೃದ್ಧಿಅಧಿಕಾರಿ ಮೋಹನ್ ಬಂಗೇರಾ, ಪಂಚಾಯತ್‌ನ ನೂತನ ಸದಸ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.