ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಪಂಚಾಯತ್ನ ನೂತನ ಅಧ್ಯಕ್ಷರಾಗಿ ಶ್ರೀಮತಿ ಜಯ ಮೋನಪ್ಪ ಗೌಡ, ಉಪಾಧ್ಯಕ್ಷರಾಗಿ ಪಿ. ಶ್ರೀನಿವಾಸ ರಾವ್ ಅವಿರೋಧ ಆಯ್ಕೆಯಾಗಿದ್ದಾರೆ.
ಒಟ್ಟು 25 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 21 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಕೇವಲ 4 ಸ್ಥಾನಗಳನ್ನಷ್ಟೇ ಪಡೆಯುವಲ್ಲಿ ಕಾಂಗ್ರೆಸ್ ಬೆಂಭಲಿತ ಅಭ್ಯರ್ಥಿಗಳು ಸಫಲರಾಗಿದ್ದರು.
ಧರ್ಮಸ್ಥಳ2ನೇ ಕ್ಷೇತ್ರದಿಂದ ಸ್ಪರ್ಧಿಸಿ ಚುನಾಯಿತರಾದ ಶ್ರೀಮತಿ ಜಯ ಮೋನಪ್ಪ ಗೌಡ ರವರು ಸಾಮಾನ್ಯ ಮಹಿಳೆ ಮೀಸಲಾತಿಯಲ್ಲಿ ನಾಮಪತ್ರ ಸಲ್ಲಿಸಿ ಅಧ್ಯಕ್ಷರಾಗಿದ್ದಾರೆ. ಧರ್ಮಸ್ಥಳ 3ನೇ ವಾರ್ಡಿನಿಂದ ಚುನಾಯಿತರಾದ ಪಿ.ಶ್ರೀನಿವಾಸ ರಾವ್ ರವರು ಸಾಮಾನ್ಯ ಮೀಸಲಾತಿಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬೆಳ್ತಂಗಡಿ ಜಾನುವಾರು ಅಭಿವೃದ್ಧಿ ಅಧಿಕಾರಿ ಡಾ| ಜಯಕೀರ್ತಿ ರವರು ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟಿದ್ದು,ಈ ಸಂದರ್ಭದಲ್ಲಿ ಗ್ರಾ.ಪಂ. ಅಭಿವೃದ್ಧಿಅಧಿಕಾರಿ ಉಮೇಶ್ ಕೆ, ಪಂಚಾಯತ್ನ ನೂತನ ಸದಸ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.