ಲಾಯಿಲ ಗ್ರಾ.ಪಂ.ಅಧ್ಯಕ್ಷರಾಗಿ ಆಶಾ ಬೆನೆಡಿಕ್ಟ ಸಲ್ದಾನ, ಉಪಾಧ್ಯಕ್ಷರಾಗಿ ಗಣೇಶ್ ಆಯ್ಕೆ

ಲಾಯಿಲ: ಲಾಯಿಲ ಗ್ರಾಮ ಪಂಚಾಯತ್‌ನ ನೂತನ ಅಧ್ಯಕ್ಷರಾಗಿ ಆಶಾ ಬೆನೆಡಿಕ್ಟ್ ಸಾಲ್ದಾನ ಚುನಾಯುತರಾಗಿದ್ದು ಹಾಗೂ ಉಪಾಧ್ಯಕ್ಷರಾಗಿ ಗಣೇಶ್ ಲಾಯಿಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಒಟ್ಟು 20 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 15 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಇನ್ನುಳಿದ 5 ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತರು-1, ಪಕ್ಷೇತರ -1, ಎಸ್ಡಿಪಿಐ ಬೆಂಬಲಿತ ಅಭ್ಯರ್ಥಿಗಳು-3 ಸ್ಥಾನಗಳನ್ನಷ್ಟೆ ಪಡೆಯುವಲ್ಲಿ ಸಫಲರಾಗಿದ್ದರು.
ಫೆ.15 ರಂದು ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಾಗ ಬಿಜೆಪಿ ಪಕ್ಷದ ಬೆಂಬಲದಿಂದ ಲಾಯಿಲ 2ನೇ ಕ್ಷೇತ್ರದಿಂದ ಸ್ಪರ್ಧಿಸಿ ಚುನಾಯಿತರಾದ ಆಶಾ ಬೆನೆಡಿಕ್ಟ್ ಸಾಲ್ದಾನ ಅವರು ಸಾಮಾನ್ಯ ಮಹಿಳೆ ಮೀಸಲಾತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರೆ, ಇವರಿಗೆ ವಿರುದ್ಧವಾಗಿ ಎಸ್‌ಡಿಪಿಐ ಪಕ್ಷ ಬೆಂಬಲದಿಂದ ಚುನಾಯಿತರಾಗಿದ್ದ ಸದಸ್ಯೆ ಸಾರಮ್ಮ ಅವರು ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿ ಬೆಂಬಲಿತರಾಗಿ ಲಾಯಿಲ 3ನೇ ವಾರ್ಡಿನಿಂದ ಚುನಾಯಿತರಾದ ಗಣೇಶ್ ಲಾಯಿಲ ರವರು ಹಿಂದುಳಿದ ವರ್ಗ ಎ ಮೀಸಲಾತಿಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು.
ಚುನಾವಣಾಧಿಕಾರಿ ಬೆಳ್ತಂಗಡಿ ತಾ.ಪಂ ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ತಾರಕೇಸರಿ ರವರು ಚುನಾವಣಾ ಆಯ್ಕೆ ಪ್ರಕ್ರಿಯೆಯನ್ನು ನಡೆಸಿ, ಅಧ್ಯಕ್ಷ ಸ್ಥಾನಕ್ಕೆ ಎರಡು ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಚುನಾವಣೆಯನ್ನು ನಡೆಸಿದರು.
ಚುನಾವಣೆಯಲ್ಲಿ ಮತ ಎಣಿಕೆ ನಡೆದು ಆಶಾ ಬೆನೆಡಿಕ್ಟ್ ಸಾಲ್ದಾನ ರವರು ೧೫ ಮತಗಳನ್ನು ಪಡೆದುಕೊಂಡು ಅಧ್ಯಕ್ಷರಾಗಿ ಚುನಾಯಿತರಾದರು. ಇವರ ಪ್ರತಿಸ್ಪರ್ಧಿ ಸಾರಮ್ಮ ಕೇವಲ 2 ಮತಗಳನ್ನು ಪಡೆಯಲಷ್ಟೇ ಶಕ್ತರಾದರು.
ಉಪಾಧ್ಯಕ್ಷೆ ಸ್ಥಾನಕ್ಕೆ ಗಣೇಶ್ ಲಾಯಿಲಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಗಳು ಅವರ ಅವಿರೊಧ ಆಯ್ಕೆಯನ್ನು ಘೋಷಿಸಿದರು.
ಈ ಸಂದರ್ಭದಲ್ಲಿ ಗ್ರಾ.ಪಂ. ಅಭಿವೃದ್ಧಿಅಧಿಕಾರಿ ವೆಂಕಟಕೃಷ್ಣ, ಕಾರ್ಯದರ್ಶಿ ರೇಶ್ಮಾ ಗಂಜಿಗಟ್ಟಿ, ಪಂಚಾಯತ್‌ನನೂತನ ಸದಸ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.