ನೆರಿಯ ಗ್ರಾ.ಪಂ ಅಧ್ಯಕ್ಷರಾಗಿ ವಸಂತಿ,ಉಪಾಧ್ಯಕ್ಷರಾಗಿ ಕುಶಲ ಅವಿರೋಧ ಆಯ್ಕೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ನೆರಿಯ: ನೆರಿಯ ಗ್ರಾಮ ಪಂಚಾಯತದ ನೂತನ ಅಧ್ಯಕ್ಷರಾಗಿ ಶ್ರೀಮತಿ ವಸಂತಿ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಕುಶಲಾ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನೆರಿಯ ಗ್ರಾ.ಪಂನಲ್ಲಿ ಫೆ.15 ರಂದು ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನೆರಿಯ ಪಶು ಸಂಗೋಪಣಾ ಇಲಾಖೆಯ ಪಶು ವೈದ್ಯಾಧಿಕಾರಿ ಮಂಜ ನಾಯ್ಕ ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಗಾಯತ್ರಿ, ಕಾರ್ಯದರ್ಶಿ ಅಜಿತ್, ಗ್ರಾ.ಪಂ ನೂತನ ಸದಸ್ಯರು, ಗ್ರಾ.ಪಂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


ನೆರಿಯ ಗ್ರಾಮ ಪಂಚಾಯತ್‌ನ 17 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 12 ಸ್ಥಾನಗಳನ್ನೂ ಪಡೆದುಕೊಂಡು ಪಂಚಾಯತದ ಅಧಿಕಾರವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಕೇವಲ 5 ಸ್ಥಾನಗಳನ್ನಷ್ಟೇ ಪಡೆಯುವಲ್ಲಿ ಸಫಲರಾಗಿದ್ದರು.
ನೆರಿಯ ಗ್ರಾಮ ಪಂಚಾಯತದಲ್ಲಿ ಅಧ್ಯಕ್ಷ ಗಾದಿಗೆ ಪ.ಜಾತಿ ಮಹಿಳೆ ಮೀಸಲಾತಿ ನಿಗದಿಯಾಗಿದ್ದು, ನೆರಿಯ ವಾರ್ಡ್-4 ರಲ್ಲಿ ಸ್ಪರ್ಧಿಸಿ ಚುನಾಯಿತರಾಗಿದ್ದ ಶ್ರೀಮತಿ ವಸಂತಿ ರವರು ಅಧ್ಯಕ್ಷ ಸ್ಥಾನಕ್ಕೆ ಹಾಗೂ ನೆರಿಯ 3ನೇ ವಾರ್ಡಿನಲ್ಲಿ ಸ್ಪರ್ಧಿಸಿ ಚುನಾಯಿತರಾದ ಶ್ರೀಮತಿ ಕುಶಲ ರವರು ಹಿಂದುಳಿದ ವರ್ಗ ಎ ಮೀಸಲಾತಿಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.