ಅಂಡಿಂಜೆ: ಗ್ರಾ.ಪಂ.ನ ನೂತನ ಅಧ್ಯಕ್ಷೆಯಾಗಿ ಜಯಂತಿ, ಉಪಾಧ್ಯಕ್ಷೆಯಾಗಿ ಶ್ವೇತಾ ಆಯ್ಕೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 

ಅಂಡಿಂಜೆ: ಅಂಡಿಂಜೆ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷೆಯಾಗಿ ಜಯಂತಿ, ಉಪಾಧ್ಯಕ್ಷೆಯಾಗಿ ಶ್ವೇತಾ ಆಯ್ಕೆಯಾಗಿದ್ದಾರೆ.

ಒಟ್ಟು 13 ಸ್ಥಾನಗಳಿಗೆ  ಚುನಾವಣೆ ನಡೆದಿದ್ದು, ಆ ಪೈಕಿ 9  ಸ್ಥಾನವನ್ನು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಪಡೆದು ಅಧಿಕಾರ ಚುಕ್ಕಾಣಿ ಹಿಡಿದಿದ್ದಾರೆ.  ಉಳಿದ ಸ್ಥಾನಗಳಲ್ಲಿ 3 ಸ್ಥಾನಗಳು ಕಾಂಗ್ರೇಸ್ ಪಾಲಾಗಿದ್ದರೆ, ಪಕ್ಷೇತರ ಬೆಂಬಲಿತರು 1 ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಅಂಡಿಂಜೆ 1ನೇ ಕ್ಷೇತ್ರದಿಂದ ಸ್ಪರ್ಧಿಸಿ ಚುನಾಯಿತರಾದ ಜಯಂತಿ ಸಾಮಾನ್ಯ ಮಹಿಳಾ ಮೀಸಲಾತಿ ಅಡಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಕೊಕ್ರಾಡಿ 2ನೇ ಕ್ಷೇತ್ರದಿಂದ ಸ್ಪರ್ಧಿಸಿ ಚುನಾಯಿತರಾದ ಶ್ವೇತಾ ಸಾಮನ್ಯ ಮೀಸಲಾತಿಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿ ಅವಿರೋಧ ಆಯ್ಕೆಯಾಗಿದ್ದಾರೆ.

ಬೆಳ್ತಂಗಡಿ ಪಶುಸಂಗೋಪನ ಇಲಾಖೆಯ ಸಹಾಯಕ ನಿರ್ದೇಶಕ ರವಿ ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟಿದ್ದು, ಈ ಸಂದರ್ಭದಲ್ಲಿ ಪಂ.ಅ. ಅಧಿಕಾರಿ ಪುರುಷೋತ್ತಮ, ಕಾರ್ಯದರ್ಶಿ ನಿರ್ಮಲ್ ಕುಮಾರ್, ನೂತನ ಪಂಚಾಯತ್ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.