ಉಜಿರೆ ಗ್ರಾ.ಪಂ.ಅಧ್ಯಕ್ಷರಾಗಿ ಪುಷ್ಪಾವತಿ ಆರ್ ಶೆಟ್ಟಿ ಉಪಾಧ್ಯಕ್ಷರಾಗಿ ರವಿ ಕುಮಾರ್ ಆಯ್ಕೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆ: ಉಜಿರೆ ಗ್ರಾಮ ಪಂಚಾಯತ್‌ನ ನೂತನ ಅಧ್ಯಕ್ಷರಾಗಿ ಶ್ರೀಮತಿ ಪುಷ್ಪಾವತಿ ಆರ್ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ರವಿಕುಮಾರ್ ಆಯ್ಕೆಯಾಗಿದ್ದಾರೆ.
ಉಜಿರೆ ಗ್ರಾ.ಪಂನ ಒಟ್ಟು 34 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 25 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಕಾಂಗ್ರೆಸ್ ಬೆಂಬಲಿತರು 9 ಸ್ಥಾನಗಳನ್ನಷ್ಟೆ ಪಡೆಯುವಲ್ಲಿ ಸಫಲರಾಗಿದ್ದರು.
ಫೆ.15 ರಂದು ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಾಗ ಬಿಜೆಪಿ ಪಕ್ಷದ ಬೆಂಬಲದಿಂದಉಜಿರೆ 5ನೇ ಕ್ಷೇತ್ರದಿಂದ ಸ್ಪರ್ಧಿಸಿ ಚುನಾಯಿತರಾದ ಪುಷ್ಪಾವತಿ ಆರ್ ಶೆಟ್ಟಿ ಅವರು ಸಾಮಾನ್ಯ ಮಹಿಳೆ ಮೀಸಲಾತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರೆ, ಇದೇ ಪಕ್ಷ ಬೆಂಬಲದಿಂದ ಆಯ್ಕೆಯಾಗಿದ್ದ ಸದಸ್ಯೆ ಉಷಾಕಿರಣ್ ಮತ್ತು ಕಾಂಗ್ರೆಸ್ ಬೆಂಬಲಿತ ಸದಸ್ಯೆ ನಾಗವೇಣಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಸದಸ್ಯರುಗಳಾದ ರವಿಕುಮಾರ್ ಬರಮೇಲು, ಗುರುಪ್ರಸಾದ್ ಕೋಟ್ಯಾನ್ ಹಾಗೂ ಕಾಂಗ್ರೆಸ್ ಬೆಂಬಲಿತರಾದ ಶರೀಫ್‌ರವರು ನಾಮಪತ್ರ ಸಲ್ಲಿಸಿದರು. ಆದರೆ ಕೊನೆ ಕ್ಷಣದಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ ಉಷಾಕಿರಣ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ ಶರೀಫ್ ರವರು ನಾಮಪತ್ರ ಹಿಂತೆಗೆದುಕೊಂಡರು.
ಚುನಾವಣಾಧಿಕಾರಿ ಉಜಿರೆ ಪಶು ಸಂಗೋಪಣಾ ಇಲಾಖೆಯ ಪಶು ವೈದ್ಯಾಧಿಕಾರಿ ಯತೀಶ್ ರವರು ಚುನಾವಣಾ ಆಯ್ಕೆ ಪ್ರಕ್ರಿಯೆಯನ್ನು ನಡೆಸಿ, ಅಧ್ಯಕ್ಷ ಸ್ಥಾನಕ್ಕೆ ಎರಡು ನಾಮಪತ್ರ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ 2 ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಚುನಾವಣೆಯನ್ನು ನಡೆಸಿದರು.
ಚುನಾವಣೆಯಲ್ಲಿ ಮತ ಎಣಿಕೆ ನಡೆದು ಪುಷ್ಪಾವತಿ ಆರ್ ಶೆಟ್ಟಿ ರವರು 25 ಮತಗಳನ್ನು ಪಡೆದುಕೊಂಡು ಅಧ್ಯಕ್ಷರಾಗಿ ಚುನಾಯಿತರಾದರು. ಇವರ ಪ್ರತಿಸ್ಪರ್ಧಿ ನಾಗವೇಣಿ ರವರು ಕೇವಲ 9 ಮತಗಳನ್ನು ಪಡೆಯಲಷ್ಟೇ ಶಕ್ತರಾದರು.
ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ ರವಿಕುಮಾರ್ ಬರಮೇಲು 18 ಮತಗಳನ್ನು ಪಡೆದು ಉಪಾಧ್ಯಕ್ಷರಾಗಿ ಚುನಾಯಿತರಾದರೆ, ಇವರ ಪ್ರತಿಸ್ಪರ್ಧಿ ಗುರುಪ್ರಸಾದ್ ಕೋಟ್ಯಾನ್ 16 ಮತಗಳನ್ನು ಪಡೆದು ಪರಾಭವಗೊಂಡರು.
ಈ ಸಂದರ್ಭದಲ್ಲಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಪಿ.ಹೆಚ್, ಕಾರ್ಯದರ್ಶಿ ಜಯಂತ್ ಯು.ಬಿ,  ಲೆಕ್ಕಸಹಾಯಕ ಮಂಜು ಕೆ.ಜಿ ಪಂಚಾಯತ್‌ನ ನೂತನ ಸದಸ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು, ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.