6 ರಿಂದ 8ನೇ ತರಗತಿಗಳ ಪ್ರಾರಂಭಕ್ಕೆ ಹಸಿರು ನಿಶಾನೆ: ಇನ್ನು ಮುಂದೆ 6 ರಿಂದ 12ನೇ ತರಗತಿಯವರೆಗೆ ಪೂರ್ಣವಾಗಿ ಶಾಲಾರಂಭ

 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಸದ್ಯಕ್ಕಿಲ್ಲ ಶಾಲೆ


ಬೆಳ್ತಂಗಡಿ: ಈಗಾಗಲೇ ರಾಜ್ಯದಲ್ಲಿ 9 ರಿಂದ 12ನೇ ತರಗತಿವರೆಗೆ ಶಾಲೆಗಳು ಆರಂಭಗೊಂಡಿದ್ದು, ಇನ್ನು ಮುಂದೆ 6ರಿಂದ 8ನೇ ತರಗತಿಗಳು ಆರಂಭಗೊಳ್ಳಲಿದೆ. ಬೆಂಗಳೂರು ನಗರ ಜಿಲ್ಲೆ ಹಾಗೂ ಕೇರಳ ಗಡಿಭಾಗವನ್ನು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಲ್ಲೂ 6ರಿಂದ 8ನೇ ತರಗತಿಗಳು ಪೂರ್ಣಪ್ರಮಾಣದಲ್ಲಿ ಪ್ರಾರಂಭಗೊಳಿಸುವಂತೆ ರಾಜ್ಯ ಸರ್ಕಾರ ಆದೇಶ ನೀಡಿದೆ.
ಕೋವಿಡ್-19 ಹಿನ್ನೆಲೆಯಲ್ಲಿ 1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಇದುವರೆಗೆ ವಿದ್ಯಾಗಮ ಯೋಜನೆಯ ಮುಖಾಂತರ ಶಿಕ್ಷಣ ನೀಡಲಾಗುತ್ತಿತ್ತು. ಇನ್ನು ಮುಂದೆ ನೇರವಾಗಿ ಶಾಲೆಯಲ್ಲಿ ವಿದ್ಯಾರ್ಜನೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.


ಫೆ.16 ರಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 1ರಿಂದ 5ನೇ ತರಗತಿಯವರೆಗೆ ವಿದ್ಯಾಗಮ ಯೋಜನೆ ಆರಂಭಿಸುವ ಕುರಿತು ಮುಂದಿನ ಸಭೆಯಲ್ಲಿ ನಿರ್ಧರಿಸಲಾಗುವುದು. ವಿದ್ಯಾರ್ಥಿಗಳು ಶಾಲೆಗೆ ಬರುವುದು ಹಾಗೂ ಶಾಲೆಗೆ ಬರುವ ಮಕ್ಕಳಿಗೆ ಪೋಷಕರ ಅನುಮತಿ ಕಡ್ಡಾಯವಾಗಿರುವುದಿಲ್ಲ. ರಾಜ್ಯದಲ್ಲಿ 2ನೇ ಹಂತದ ಕೋವಿಡ್ ಅಲೆ ಇರುವುದರಿಂದ, ಬೆಂಗಳೂರು ಮತ್ತು ಕೇರಳ ಗಡಿಯಲ್ಲಿ 6 ಮತ್ತು 7ನೇ ತರಗತಿಗಳನ್ನು ಹೊರತುಪಡಿಸಿ 8ನೇ ತರಗತಿಗಳು ಮಾತ್ರ ಆರಂಭವಾಗಲಿವೆ ಎಂದು ಸುದ್ಧಿಗೋಷ್ಠಿಯಲ್ಲಿ ವಿವರಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.