ಎಸ್.ಡಿ.ಎಂ ಪಾಲಿಟೆಕ್ನಿಕ್ ಕಾಲೇಜು: ವಾರ್ಷಿಕ ರಾಷ್ಟ್ರೀಯ ಸೇವಾ ಯೋಜನೆ ಸಂಘ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ ಸಂಘ ಉದ್ಘಾಟನಾ ಕಾರ್ಯಕ್ರಮ ಇಂದು ನಡೆಯಿತು.

ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 2021ನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ  ಉದ್ಘಾಟಿಸಿದರು. ಈ ವೇಳೆ  ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸೇವಾ ಯೋಜನೆಯ ಅಗತ್ಯತೆಯ ಬಗ್ಗೆ ತಿಳಿಸಿರುವುದರೊಂದಿಗೆ, ಸಂಘದ ಚಟುವಟಿಕೆಗಳಲ್ಲಿ ಭಾಗಿಯಾಗುವ ಮೂಲಕ ಭವ್ಯ ಭಾರತದ ನಿರ್ಮಾಣಕ್ಕೆ ಸಹಕಾರಿ ಆಗುವಂತೆ ಕರೆನೀಡಿದರು.

ಈ  ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಶ್ರೀ ಕೆ ಪಿ ಪ್ರಸಾದ್ , ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಶ್ರೀ ಪ್ರವೀಣ್ ಗೌಡ, ಉಪಯೋಜನಾಧಿಕಾರಿ ಶ್ರೀ ಯಜ್ಞೆಶ್ ಶೆಟ್ಟಿ, ವಿದ್ಯಾರ್ಥಿ ನಾಯಕ ಕಿರಣ್ ಆರ್.ಎಸ್, ನಾಯಕಿ ನೀತಾ ಜೈನ್ ಹಾಗೂ ಕಾಲೇಜಿನ ಉಪನ್ಯಾಸಕರು ವಿದ್ಯಾರ್ಥಿಗಳು ಹಾಜರಿದ್ದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.