
ಹತ್ಯಡ್ಕ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ರೆಖ್ಯ ಶಾಖೆಯ ನೂತನ ನ್ಯಾಯಬೆಲೆ ಅಂಗಡಿ ಉದ್ಘಾಟನಾ ಕಾರ್ಯಕ್ರಮ ಫೆ.16ರಂದು ನಡೆಯಿತು.
ಶಾಸಕ ಹರೀಶ್ ಪೂಂಜ ನೂತನ ನ್ಯಾಯಬೆಲೆ ಅಂಗಡಿಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ಅಧ್ಯಕ್ಷ ರಾಘವೇಂದ್ರ ನಾಯಕ್, ಉಪಾಧ್ಯಕ್ಷ ರಾಜು ಕೆ. ಸಾಲಿಯಾನ್, ನಿರ್ದೇಶಕರುಗಳಾದ ಕೊರಗಪ್ಪ ಗೌಡ, ಕುಶಾಲಪ್ಪ ಗೌಡ, ಬೇಬಿಕಿರಣ್, ಮುರಳಿಧರ ಶೆಟ್ಟಿಗಾರ್, ಬೇಬಿ, ಜಿ.ಪಂ. ಸದಸ್ಯರಾದ ಕೊರಗಪ್ಪ ನಾಯ್ಕ, ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷ ನವೀನ್ ಕೆ.ಯನ್, ಗ್ರಾ.ಪಂ. ಸದಸ್ಯರಾದ ಚೇತನ್ ಕುಮಾರ್, ನಾಗೇಶ್, ಕುಶಾಲಪ್ಪ ಗೌಡ, ಗಾಯತ್ರಿ, ವಿಶಾಲಾಕ್ಷಿ, ಸುಧೀರ್ ಕುಮಾರ್ ಎಂ.ಎಸ್, ಪ್ರೇಮಚಂದ್ರ, ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ, ಶಿಶಿಲ ಗ್ರಾ.ಪಂ ಅಧ್ಯಕ್ಷ ಸಂದೀಪ್, ಗುಡ್ರಮಲ್ಲೇಶ್ವರ ದೇವಸ್ಥಾನದ ಆನುವಂಶಿಕ ಮೊಕ್ತಸರ ಶೀನಪ್ಪ ರೈ, ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಮಂಜುನಾಥ ಗೌಡ ಕೈಕುರೆ, ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಪಿ.ಟಿ ಮ್ಯಾಥ್ಯು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ ತ್ಯಾಂಪಣ್ಣ ಶೆಟ್ಟಿಗಾರ್ ಸ್ವಾಗತಿಸಿದರು, ನಿರ್ದೇಶಕ ಕುಶಾಲಪ್ಪ ಗೌಡ ಧನ್ಯವಾದವಿತ್ತರು. ಸಿಬ್ಬಂದಿವರ್ಗದವರು ಸಹಕರಿಸಿದರು