
ಬೆಳ್ತಂಗಡಿ: ತೋಟಗಾರಿಕಾ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಬೆಳ್ತಂಗಡಿ ಮತ್ತು ತಾಲೂಕು ಪರಿಶಿಷ್ಟ ವರ್ಗ ವಿವಿಧೋದ್ದೇಶ ಸಹಕಾರಿ ಸಂಘ ಲ್ಯಾಂಪ್ಸ್ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ರೈತ ತರಬೇತಿ ಕಾರ್ಯಕ್ರಮ ನಡೆಯಿತು.
ಪ್ರಸಕ್ತ ಸಾಲಿನ ರಾಷ್ಟ್ರೀಯ ತೋಟಗಾರಿಕ ಮಿಷನ್ ಯೋಜನೆಯಡಿಯಲ್ಲಿ ಫೆ.16ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ “ತೋಟಗಾರಿಕಾ ಬೆಳೆಗಳಲ್ಲಿ ಸುಧಾರಿತ ಬೇಸಾಯ ವಿಧಾನ” ಈ ವಿಷಯದ ಕುರಿತು ರೈತರಿಗೆ ತರಬೇತಿ ಶಿಬಿರ ಮತ್ತು ಪ್ರಾತ್ಯಕ್ಷಿಕೆ ಹಮ್ಮಿಕೊಳ್ಳಲಾಗಿತ್ತು.
ಲ್ಯಾಂಪ್ಸ್ ಸಹಕಾರಿ ಸಂಘದ ಅಧ್ಯಕ್ಷ ಲಿಂಗಪ್ಪ ನಾಯ್ಕ ಉರುವಾಲು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬೆಳ್ತಂಗಡಿ ನ.ಪಂ. ಅಧ್ಯಕ್ಷೆ ರಜನಿ ಕುಡ್ವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಶಿಬಿರದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಸಹಾಯಕ ತೋಟಗಾರಿಕಾ ನಿರ್ದೇಶಕಿ ಲಿಖಿತ್ ರಾಜ್ ಸುಧಾರಿತ ಬೇಸಾಯ ಕ್ರಮದ ಕುರಿತು ಮಾಹಿತಿ ರವಾನಿಸುವದರೊಂದಿಗೆ, ಪ್ರಾಯೋಗಿಕವಾಗಿ ವಾಸ್ತವ ವಿಷಯವನ್ನು ರೈತರಿಗೆ ಮನದಟ್ಟು ಮಾಡಿಸಿದರು. ಹಿರಿಯ ತೋಟಗಾರಿಕಾ ನಿರ್ದೇಶಕ ಚಂದ್ರಶೇಖರ್ ತೋಟಗಾರಿಕೆ ಇಲಾಖೆಯಲ್ಲಿ ರೈತರಿಗೆ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
ಲ್ಯಾಂಪ್ಸ್ ನಿರ್ದೇಶಕಿ ಜಯಲಕ್ಷ್ಮೀ, ತೋಟಗಾರಿಕಾ ಅಧಿಕಾರಿಗಳು ಹಾಗೂ ಲ್ಯಾಂಪ್ಸ್ ಸಹಕಾರಿ ಸಂಘ ಹಾಗೂ ಅದರ ಸ್ವಸಹಾಯ ಸಂಘದ ಸದಸ್ಯರು ಉಪಸ್ದಿತರಿದ್ದರು.