ಫೆ.20: ಮೂಡುಬಿದಿರೆ ಕೋಟಿ-ಚೆನ್ನಯ ಜೋಡುಕರೆಯಲ್ಲಿ 18ನೇ ವರ್ಷದ ಹೊನಲು ಬೆಳಕಿನ ಕಂಬಳೋತ್ಸವ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮೂಡುಬಿದಿರೆ: ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿ ವತಿಯಿಂದ  18ನೇ ವರ್ಷದ ಹೊನಲು ಬೆಳಕಿನ ಕಂಬಳೋತ್ಸವನ್ನು ಆಯೋಜಿಸಲಾಗಿದ್ದು,  ಫೆ.20ರಂದು ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮದ ಕೋಟಿ-ಚೆನ್ನಯ ಜೋಡುಕರೆಯಲ್ಲಿ ನಡೆಯಲಿದೆ.

ಈ ಕುರಿತು  ಶಾಸಕ, ಕಂಬಳ ಸಮಿತಿಯ ಅಧ್ಯಕ್ಷ ಉಮಾನಾಥ ಕೋಟ್ಯಾನ್‌ ಪತ್ರಿಕಾಗೋಷ್ಠಿ ನಡೆಸಿದ್ದು,  ಚೌಟರ ಅರಮನೆಯ ಕುಲದೀಪ್‌ ಎಂ. ಅವರ ಅಧ್ಯಕ್ಷತೆಯಲ್ಲಿ ಆಲಂಗಾರು ಬಡಗು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ವೇ.ಮೂ. ಈಶ್ವರ ಭಟ್‌, ಆಲಂಗಾರು ಚರ್ಚಿನ ಧರ್ಮಗುರು ವಾಲ್ಟರ್‌ ಡಿಸೋಜ, ಪುತ್ತಿಗೆ ನೂರಾನಿ ಮಸ್ಜೀದ್‌ನ ಮೌಲಾನ ಝಿಯಾವುಲ್ಲ ಹಾಗೂ ಸುಧೀರ್‌ ಹೆಗ್ಡೆ ಕುಂಟಾಡಿ ಅವರು ಫೆ.20ರ ಬೆಳಗ್ಗೆ 7 ಗಂಟೆಗೆ ಉದ್ಘಾಟಿಸಲಿದ್ದಾರೆ ಎಂದರು.

ಸಿನಿ ತಾರೆಯರ ಭೇಟಿ

ಈ ಬಾರಿಯ ಕಂಬಳದ ಬಗ್ಗೆ ಅಧ್ಯಯನ ನಡೆಸಲು, ಚಿತ್ರರಂಗದಲ್ಲಿ 3 ಬಾರಿ ಫಿಲಂಫೇರ್‌ ಪ್ರಶಸ್ತಿಯನ್ನು ಪಡೆದಿರುವ ರಾಜೇಂದ್ರ ಸಿಂಗ್‌ ಬಾಬು ಹಾಗೂ ತುಳು ಚಿತ್ರನಟ ಅರುಣ್‌ ರೈ ಅವರು ಭಾಗವಹಿಸಲ್ಲಿದ್ದು, ತುಳು ಸಹಿತ ಬೇರೆ ಬೇರೆ ಭಾಷೆಗಳಲ್ಲಿ ಕಂಬಳದ ಬಗ್ಗೆ ಸಾಕ್ಷ್ಯಚಿತ್ರವನ್ನು ನಿರ್ಮಾಣ ಮಾಡುವ ಬಗ್ಗೆ ಅವರು ಚಿಂತನೆ ನಡೆಸುತ್ತಿದ್ದಾರೆ ಎಂದು ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ಗುಣಪಾಲ ಕಡಂಬ ತಿಳಿಸಿದರು.

ಇನ್ನು ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಸೇರಿದಂತೆ ಇತರೆ ಸಚಿವರು ಉಪಸ್ಥಿತರಿಲಿದ್ದು, ಈ ಬಾರಿಯ ಕಂಬಳದಲ್ಲಿ 175ಕ್ಕಿಂತ 200 ಜತೆ ಕೋಣಗಳು ಸ್ಪರ್ಧೆಯ ಕಣಕ್ಕಿಳಿಯುವ ನಿರೀಕ್ಷೆ ಇದೆ.

ಈ ಸಂದರ್ಭದಲ್ಲಿ ಸಮಿತಿಯ ಕೋಶಾಧಿಕಾರಿ ಭಾಸ್ಕರ್‌ ಕೋಟ್ಯಾನ್‌, ಪುರಸಭಾ ಅಧ್ಯಕ್ಷ ಪ್ರಸಾದ್‌ ಕುಮಾರ್‌, ವಾರ್ಡ್‌ ಸದಸ್ಯ ನಾಗರಾಜ ಪೂಜಾರಿ, ಜಿ.ಪಂ ಸದಸ್ಯ ಕೆ.ಪಿ.ಸುಚರಿತ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್‌ ಎಂ, ಜಿಲ್ಲಾ ಉಪಾಧ್ಯಕ್ಷ ಈಶ್ವರ ಕಟೀಲ್‌, ಮಂಡಲ ಅಧ್ಯಕ್ಷ ಸುನೀಲ್‌ ಆಳ್ವ, ನ್ಯಾಯವಾದಿ ಸುರೇಶ್‌ ಕೆ.ಪೂಜಾರಿ, ಮೂಡಾ ಅಧ್ಯಕ್ಷ ಮೇಘನಾಥ ಶೆಟ್ಟಿ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.