50 ವರ್ಷ ಮೇಲ್ಪಟ್ಟವರಿಗೆ ಮುಂದಿನ ತಿಂಗಳಿಂದ ಸಿಗಲಿದೆ ಕೋವಿಡ್ ಲಸಿಕೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಂಗಳೂರು: ಮಾರ್ಚ್ ತಿಂಗಳಿನಿಂದ 50 ವರ್ಷ ಮೇಲ್ಪಟ್ಟವರು ಹಾಗೂ ದೀರ್ಘಕಾಲಿಕ ರೋಗಗಳಿಂದ ಬಳಲುತ್ತಿರುವವರಿಗೆ ಕೊರೋನಾ ಲಸಿಕೆನ್ನು ನೀಡಲಾಗುತ್ತದೆ ಎಂದು ರಾಜ್ಯ ಆರೋಗ್ಯ ಇಲಾಖೆಯ ಅಧಿಕಾರಿಗಳು ಬುಧವಾರ ಹೇಳಿದ್ದಾರೆ.

ಕೊರೋನಾ ಲಸಿಕೆ ಕುರಿತು ಪತ್ರಕರ್ತರಿಗಾಗಿ ನಡೆಸಲಾದ ಕಾರ್ಯಗಾರದಲ್ಲಿ ಮಾತನಾಡಿರುವ ಆರೋಗ್ಯ ಇಲಾಖೆ ಅಧಿಕಾರಿಗಳು ಈ ಮಾಹಿತಿಯನ್ನು ನೀಡಿದ್ದಾರೆ.

ವಯಸ್ಸಿನ ಮಾನದಂಡಗಳನ್ನು ಅನುಸರಿಸಲು ನಾವು ಮತದಾರರ ಪಟ್ಟಿಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದ್ದು, 50 ವರ್ಷಕ್ಕಿಂತ ಕಡಿಮೆ ಇದ್ದವರು ಹಾಗೂ ದೀರ್ಘಕಾಲಿಕ ರೋಗಗಳಿಂದ ಬಳಲುತ್ತಿರುವವರ ಕುರಿತಂತೆ ಆರೋಗ್ಯ ಇಲಾಖೆ ನಡೆಸಿರುವ ಸಮೀಕ್ಷಾ ವರದಿಗಳನ್ನು ಬಳಕೆ ಮಾಡಲಾಗುತ್ತದೆ. ಕೇಂದ್ರ ಸರ್ಕಾರ ತನ್ನ ಮಾರ್ಗಸೂಚಿಯಲ್ಲಿ ಯಾವೆಲ್ಲಾ ದೀರ್ಘಕಾಲಿಕ ರೋಗಗಳನ್ನು ಪಟ್ಟಿ ಮಾಡಲಿದೆ ಎಂಬ ಸ್ಪಷ್ಟ ಮಾಹಿತಿಗಳು ಲಭ್ಯವಾಗಿಲ್ಲ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಗಳಿಗಳಿಗಾಗಿ ಕಾಯುತ್ತಿದ್ದು, ನಿಯಮಗಳು ಬಿಡುಗಡೆಗೊಂಡ ನಂತರ ಲಸಿಕೆ ವಿತರಣೆ ಪ್ರಾರಂಭಿಸಲಾಗುತ್ತದೆ.

ಇನ್ನು ಆರೋಗ್ಯ ಹಾಗೂ ಮುಂಚೂಣಿಯಲ್ಲಿರುವ ಕೊರೋನಾ ವಾರಿಯರ್ಸ್ ಗಳಿಗೆ ಲಸಿಕೆ ನೀಡಲು ಸರ್ಕಾರ ಈಗಾಗಲೇ ಫೆಬ್ರವರಿ 20 ರವರೆಗೆ ಗಡುವು ನೀಡಿದ್ದು, ಕ್ಯಾನ್ಸರ್ ರೋಗದಿಂದ ಬಳಲುತ್ತಿರುವವರು, ಅಂಗಾಂಗ ಕಸಿ ಮಾಡಿಸಿಕೊಂಡವರ ಕುರಿತು ರಾಜ್ಯ ಸರ್ಕಾರ ಮಾಹಿತಿ ಕಲೆ ಹಾಕುತ್ತಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.