ನೆರಿಯ: ಇಲ್ಲಿಯ ಕಾಟಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಪ್ರಯುಕ್ತ ಪೂರ್ವತಯಾರಿ ಬಗ್ಗೆ ಪೂರ್ವಭಾವಿ ಸಭೆಯು ಫೆ.19 ರಂದು ಜರುಗಿತು.
ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಹರೀಶ್ ಪೂಂಜ ರವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರಕಾರದಿಂದ ದೇವಸ್ಥಾನಕ್ಕೆ ರೂ. 25 ಲಕ್ಷ ಬಿಡುಗಡೆಯಾಗಿದ್ದು, ಕೆಲವೇ ದಿನಗಳಲ್ಲಿ ದೇವಸ್ಥಾನದ ಖಾತೆಗೆ ಬರಲಿದೆ ಎಂದು ತಿಳಿಸಿದರು.
ಅಣಿಯೂರಿನಿಂದ ಪರ್ಪಳವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮುಂದಿನ ತಿಂಗಳು ಹಣ ಬಿಡುಗಡೆಗೊಳಿಸಿ ಆರ್ತ್ವರ್ಕ್ ಮಾಡಿ, ರಸ್ತೆ ಅಗಲಿಕರಣಗೊಳಿಸಲಾಗುವುದು. ಬಹ್ಮಕಲಶೋತ್ಸವದ ನಂತರ ರಸ್ತೆ ಕಾಮಾಗಾರಿ ನಡೆಸಲಾಗುವುದು ಎಂದರು. ಅಲ್ಲದೆ ಬ್ರಹ್ಮಕಲಶೋತ್ಸವ ಸಮಿತಿಗಳು ಹೇಗೆ ಕೆಲಸ ಮಾಡಬೇಕು ಎಂಬ ಮಾಹಿತಿ ನೀಡಿದರು.

ಸಭೆಯಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೃಷ್ಣ ಕುಮಾರ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಜಯದೇವ್ ಪ್ರಧಾನ ಕಾರ್ಯದರ್ಶಿ ಪಿ.ಕೆ.ರಾಜನ್, ಬಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಸತೀಶ್ ಕುಳೆನಾಡಿ, ಗ್ರಾಪಂ.ಅಧ್ಯಕ್ಷೆ ವಸಂತಿ ಧರ್ಮಸ್ಧಳ, ಗ್ರಾಮಾಭಿವೃಧ್ಧಿ ಯೋಜನೆಯ ನೆರಿಯ ಬಯಲು ಒಕ್ಕೂಟದ ಅಧ್ಯಕ್ಷ ಸತೀಶ್ ಕುಕ್ಕೆಜಾಲು, ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು, ಗ್ರಾಮಸ್ಧರು ಉಪಸ್ಧಿತರಿದ್ದರು.