ನಾಳೆ ಪುತ್ತೂರು ಸುದ್ದಿ ಚಾನಲ್ ಲೋಕಾರ್ಪಣೆ: ಸುದ್ದಿ ವರ್ಷದ ಪ್ರಶಸ್ತಿ ಪುರಸ್ಕೃತ ಸಾಧಕರಿಗೆ ಸನ್ಮಾನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಸುದ್ದಿ  ಚಾನೆಲ್  ಕಛೇರಿ ಉದ್ಘಾಟನೆ * ಅಂಬರ ಮರ್ಲೆರ್ ಧಾರಾವಾಹಿಗೆ ಚಾಲನೆ * ಕಲಾವಿದರಿಗೆ ಸನ್ಮಾನ *

ಸುದ್ದಿ ಲೋಕಲ್ ವೋಕಲ್  ಕಾರ್ಯಕ್ರಮಕ್ಕೆ ಚಾಲನೆ* ಸುದ್ದಿ ಸಂಸ್ಥೆಯ ಸಿಬ್ಬಂದಿಗಳಿಗೆ ಗೌರವಾರ್ಪಣೆ*

ಸುದ್ದಿ ಸಂಸ್ಥೆಯಲ್ಲಿ ಹಿಂದೆ ಕಾರ್ಯ ನಿರ್ವಹಿಸಿದ್ದವರಿಗೆ, ಇತರ ಮಾಧ್ಯಮ ಪ್ರತಿನಿಧಿಗಳಿಗೆ  ಗೌರವಾರ್ಪಣೆ*

ಬೆಳ್ತಂಗಡಿ: `ಪುತ್ತೂರು ಸುದ್ದಿ ಚಾನೆಲ್’ ಲೋಕಾರ್ಪಣೆ ಮತ್ತು ವಿವಿಧ ಕಾರ್ಯಕ್ರಮಗಳು  ನಾಳೆ(ಫೆ.೨೦) ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ.

ಬೆಳಿಗ್ಗೆ 11.30ಕ್ಕೆ ಪುತ್ತೂರು ದೇವಣ್ಣ ಕಿಣಿ ಕಟ್ಟಡದಲ್ಲಿರುವ ಸುದ್ದಿ ಮೀಡಿಯಾ ಸೆಂಟರ್‌ನಲ್ಲಿ ಸುದ್ದಿ ಚಾನೆಲ್ ಕಛೇರಿ ಉದ್ಘಾಟನೆ ಮತ್ತು ಖ್ಯಾತ ಕಲಾವಿದರನ್ನೊಳಗೊಂಡ `ಅಂಬರ ಮರ್ಲೆರ್’ ತುಳು ಹಾಸ್ಯ ಧಾರಾವಾಹಿಗೆ ಕರ್ನಾಟಕ ಸರಕಾರದ ಬಂದರು, ಮೀನುಗಾರಿಕೆ ಮತ್ತು ಜಲ ಸಾರಿಗೆ ಖಾತೆಯ ಸಚಿವರಾಗಿರುವ ಸುಳ್ಯ ಶಾಸಕ ಎಸ್.ಅಂಗಾರವರು ಚಾಲನೆ ನೀಡಲಿದ್ದಾರೆ. ಬಳಿಕ `ಅಂಬರ ಮರ್ಲೆರ್’ ತಂಡದ ಕಲಾವಿದರನ್ನು ಸನ್ಮಾನಿಸಲಿರುವ ಅಂಗಾರರವರು ಶುಭ ನುಡಿಗಳನ್ನಾಡಲಿದ್ದಾರೆ.

ಮಧ್ಯಾಹ್ನ 2 ಗಂಟೆಗೆ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ಯು.ಪಿ.ಶಿವಾನಂದರವರು ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರವರು ಪುತ್ತೂರು ಸುದ್ದಿ ಚಾನೆಲ್ ಲೋಕಾರ್ಪಣೆಗೊಳಿಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾದ ದ.ಕ.ಸಂಸದ ನಳಿನ್ ಕುಮಾರ್ ಕಟೀಲ್‌ರವರು ಸುದ್ದಿ ಚಾನೆಲ್‌ನ ಲೋಕಲ್ ವೋಕಲ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭಾಸಂಶನೆಗೈಯಲಿದ್ದಾರೆ.

ಮಾಜಿ ಸಚಿವ ಬಿ. ರಮಾನಾಥ ರೈ, ಮಾಜಿ ಸಚಿವ, ಹಾಲಿ ಮಂಗಳೂರು ಶಾಸಕ ಯು.ಟಿ.ಖಾದರ್ ಮತ್ತು ಮಂಗಳೂರು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್.ರಾಜೇಂದ್ರ ಕುಮಾರ್‌ರವರು `ಸುದ್ದಿ ವರ್ಷದ ಪ್ರಶಸ್ತಿ’ ಪುರಸ್ಕೃತ ಸಾಧಕರಿಗೆ ಸನ್ಮಾನ ನೆರವೇರಿಸಲಿದ್ದಾರೆ. ಪುತ್ತೂರು ಶಾಸಕ ಸಂಜೀವ ಮಠಂದೂರು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮತ್ತು ಸುಳ್ಯದ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್‌ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದರವರು ಸುದ್ದಿ ಬಿಡುಗಡೆ ಸಮೂಹ ಸಂಸ್ಥೆಯಲ್ಲಿ ಕಳೆದ ಹದಿನೈದು ವರ್ಷಗಳಿಗಿಂತ ಅಧಿಕ ಸಮಯಗಳಿಂದ ಕಾರ್ಯ ನಿರ್ವಹಿಸುತ್ತಿರುವ ಹಿರಿಯ ಸಿಬ್ಬಂದಿಗಳಿಗೆ ಮತ್ತು ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ನೆರವೇರಿಸಲಿದ್ದಾರೆ.

ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಸವಣೂರು ಕೆ. ಸೀತಾರಾಮ ರೈ ಮತ್ತು ಹಿರಿಯ ಪತ್ರಕರ್ತ ಈಶ್ವರ ದೈತೋಟರವರು ಸುದ್ದಿ ಸಮೂಹ ಸಂಸ್ಥೆಯಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸಿದವರಿಗೆ ಗೌರವಾರ್ಪಣೆ ಮಾಡಲಿದ್ದಾರೆ. ಪಿ.ಆರ್.ಸಿ.ಐ ಛೇರ್‌ಮ್ಯಾನ್ ಎಂ.ಬಿ.ಜಯರಾಮ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಹಿರಿಯ ಪತ್ರಕರ್ತ ಪಿ.ಬಿ.ಹರೀಶ್ ರೈಯವರು ರಾಜ್ಯದ, ಜಿಲ್ಲೆಯ ಮಾಧ್ಯಮ ಪ್ರತಿನಿಧಿಗಳನ್ನು ಗೌರವಿಸಲಿದ್ದಾರೆ. ಖ್ಯಾತ ವಕೀಲ ಮಹೇಶ್ ಕಜೆರವರು ಕಾರ್ಯಕ್ರಮ ನಿರ್ವಹಣೆ ಮಾಡಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.