ಬೆಳ್ತಂಗಡಿ: ಜಿಲ್ಲಾಡಳಿತ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು, ತಾಲೂಕು ಆಡಳಿತ ಬೆಳ್ತಂಗಡಿ ಸಹಭಾಗಿತ್ವದಲ್ಲಿ “ಜಿಲ್ಲಾಧಿಕಾರಿಗಳ ನಡೆ- ಹಳ್ಳಿಯ ಕಡೆ” ಪ್ರಥಮ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಶಿಶಿಲದಲ್ಲಿ ಫೆ.20 ರಂದು ಜರುಗಿತು.
ದ.ಕ ಜಿಲ್ಲಾಧಿಕಾರಿ ಡಾ| ಕೆ.ವಿ ರಾಜೇಂದ್ರ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಶಿಲದ ಸರಕಾರಿ ಹಿ.ಪ್ರಾ ಶಾಲೆಯಲ್ಲಿ ಸಸಿ ನೆಡುವ ಮೂಲಕ ಶಾಸಕ ಹರೀಶ್ ಪೂಂಜರವರು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಹಾಯಕ ಆಯುಕ್ತರಾದ ಯತೀಶ್ ಉಲ್ಲಾಳ್, ಜಿ.ಪಂ ಸದಸ್ಯ ಕೊರಗಪ್ಪ ನಾಯ್ಕ, ಶಿಶಿಲ ಗ್ರಾ.ಪಂ ಅಧ್ಯಕ್ಷ ಸಂದೀಪ್ ಉಪಾಧ್ಯಕ್ಷೆ ಶ್ರೀಮತಿ ವಿಮಲ. ತಾ.ಪಂ.ಅಧ್ಯಕ್ಷೆ ಶ್ರೀಮತಿ ದಿವ್ಯಜ್ಯೋತಿ. ಶಿಬಾಜೆ ಗ್ರಾ.ಪಂ ಅಧ್ಯಕ್ಷ ರತೀಶ್ ಉಪಾದ್ಯಕ್ಷ ವಿನಯಚಂದ್ರ, ತಹಶೀಲ್ದಾರ್ ರಮೇಶ್ ಬಾಬು, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್ ಮತ್ತಿತರ ಪ್ರಮುಖರು , ತಾಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಶಿಶಿಲದ ಸರಕಾರಿ ಹಿ.ಪ್ರಾ ಶಾಲೆಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಿರುವ ಜಿಲ್ಲಾಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲಿ ಪರಿಹಾರ ನೀಡಲಿದ್ದಾರೆ ಹಾಗೂ ಸಾರ್ವಜನಿಕರಿಂದ ಸ್ವೀಕಾರವಾಗುವ ಅರ್ಜಿಗಳಿಗೆ ಸೂಕ್ತ ಕ್ರಮ ತೆಗೆದುಕೊಳ್ಳಲಿದ್ದಾರೆ.