
ವೇಣೂರು: ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಾಣಿಜ್ಯ ಸಂಕೀರ್ಣ ಕಟ್ಟಡಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಇಂದು ಶಿಲಾನ್ಯಾಸ ನೆರವೇರಿಸಿದರು.
ಈ ವೇಳೆ ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಬಿ.ಇ., ಉಪಾಧ್ಯಕ್ಷ ಸುಂದರ ಪೂಜಾರಿ, ವೇಣೂರು ಗ್ರಾ.ಪಂ. ಅಧ್ಯಕ್ಷೆ ಶೋಭಾ ಹೆಗ್ಡೆ, ಉಪಾಧ್ಯಕ್ಷ ಅರುಣ್ ಕ್ರಾಸ್ತ, ಕುಕ್ಕೇಡಿ ಗ್ರಾ.ಪಂ. ಅಧ್ಯಕ್ಷ ಜನಾರ್ದನ ಪೂಜಾರಿ, ಪ್ರಮುಖರಾದ ಮೋಹನ್ ಅಂಡಿಂಜೆ, ಗಣೇಶ್ ಕಾಮತ್, ನಿತೀಶ್ ಎಚ್., ಶಶಿಧರ ಶೆಟ್ಟಿ, ಹರೀಶ್ ಪಿ.ಎಸ್., ಯಶೋಧರ ಹೆಗ್ಡೆ, ಅನೂಪ್ ಜೆ. ಪಾಯಸ್, ಸುಪ್ರಿತ್ ಜೈನ್, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತ್ ಪೂಜಾರಿ, ವಿವಿಧ ಗ್ರಾ.ಪಂ.ನ ಸದಸ್ಯರು, ಸಂಘದ ನಿರ್ದೇಶಕರುಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.