ಮಡಂತ್ಯಾರು: ಪುಂಜಾಲಕಟ್ಟೆ ಪೊಲೀಸ್ ಠಾಣಾ ವತಿಯಿಂದ ರಸ್ತೆ ಸುರಕ್ಷತೆ ಹಾಗೂ ಸಂಚಾರಿ ನಿಯಮಗಳ ಮಾಹಿತಿ ಕಾರ್ಯಕ್ರಮ ಇತ್ತೀಚೆಗೆ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜಿನಲ್ಲಿ ಜರಗಿತು.
ಪುಂಜಾಲಕಟ್ಟೆ ಆರಕ್ಷಕ ಠಾಣಾ ಉಪ ನಿರೀಕ್ಷಕರಾದ ಸೌಮ್ಯ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿ ಮಾತನಾಡಿ, ವಾಹನ ಚಾಲನೆ ಶೋಕಿಗೆ ಮಾಡುವಂತದ್ದಲ್ಲ. ವಾಹನ ಚಲಾಯಿಸುವಾಗ ಕಡ್ಡಾಯ ಹೆಲ್ಮೆಟ್ ಧರಿಸಲೇಬೇಕು. ಹೆತ್ತವರ ಬೆಂಬಲವಿದೆ ಎಂದು ಪರವಾನಿಗೆ ಇಲ್ಲದೆ ವಾಹನ ಚಲಾಯಿಸುವಂತಿಲ್ಲ. ಇಂತಹ ಪ್ರಕರಣ ಪ್ರಕರಣಗಳು ನಡೆದರೆ ಹೆತ್ತವರು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದರು.
ವಾಹನ ಚಾಲನೆಯ ಸಂದರ್ಭದಲ್ಲಿ ಮೊಬೈಲ್ ಫೋನ್ ಬಳಸುವುದು ಅಪಾಯಕ್ಕೆ ಆಹ್ವಾನ ಕೊಟ್ಟಂತೆ, ವಿದ್ಯಾರ್ಥಿ ದೆಸೆಯಲ್ಲಿ ಸಂಚಾರಿ ನಿಯಮಗಳ ಬಗ್ಗೆ ಸರಿಯಾಗಿ ಮಾಹಿತಿಯನ್ನು ತಿಳಿದುಕೊಳ್ಳಬೇಕು ಹಾಗೂ ವಿದ್ಯಾರ್ಥಿಗಳು ದೈನಂದಿನ ಚಟುವಟಿಕೆಗಳ ಬಗ್ಗೆ ಹೆತ್ತವರಲ್ಲಿ ತಿಳಿಸುವುದು ಉತ್ತಮ ಎಂದರು.
ಕಾಲೇಜಿನ ಉಪನ್ಯಾಸಕ ವೃಂದ ಹಾಗೂ ಪುಂಜಾಲಕಟ್ಟೆ ಆರಕ್ಷಕ ಠಾಣೆಯ ಸಿಬ್ಬಂದಿಗಳಾದ ಪ್ರಕಾಶ್ ಪೂಜಾರಿ, ದುಂಡಪ್ಪ ಪೂಜಾರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲ ವಂ|ಫಾ| ಜೆರೋಮ್ ಡಿ’ಸೋಜ ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ವಸಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.