ಉಜಿರೆ: ಮೂಡಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ಫೆ.20 ಹಾಗೂ 21 ರಂದು ಜರುಗಿದ ರಾಜ್ಯಮಟ್ಟದ ಭಾರ ಎತ್ತುವ ಸ್ಪರ್ಧೆಯ ಪುರುಷರ ವಿಭಾಗದಲ್ಲಿ ಉಜಿರೆಯ ಎಸ್ಡಿಎಂ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಮೂರು ಚಿನ್ನ, ಎರಡು ಬೆಳ್ಳಿ ಹಾಗೂ ನಾಲ್ಕು ಕಂಚಿನ ಪದಕಗಳೊಂದಿಗೆ ಸಮಗ್ರ ಪ್ರಶಸ್ತಿಯನ್ನು ಗಳಿಸಿರುತ್ತಾರೆ. ವಿದ್ಯಾರ್ಥಿ ಪ್ರಜ್ವಲ್ ಶ್ರೇಷ್ಠ ಭಾರ ಎತ್ತುವ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಶ್ರೀ ಧ.ಮಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ.ಯಶೋವರ್ಮ ಅವರ ಮಾರ್ಗದರ್ಶನದಲ್ಲಿ ರಾಜೇಂದ್ರ ಪ್ರಸಾದ್ ಹಾಗೂ ರಮೇಶ್ ಎಚ್. ಕೋಚ್ಗಳಾಗಿ ಕಾರ್ಯನಿರ್ವಹಿಸಿದ್ದರು.