ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ:   ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ ಹಾಗೂ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಗೌರವಾಧ್ಯಕ್ಷ ವಸಂತ ಬಂಗೇರ ಅವರು ಮಂಗಳವಾರ ಬಿಡುಗಡೆಗೊಳಿಸಿದರು.

ಫೆ.23 ರಂದು ಬೆಳ್ತಂಗಡಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾಭವನದಲ್ಲಿ ಜಾತ್ರ ಮಹೋತ್ಸವದ ಆಮಂತ್ರಣ ಬಿಡುಗಡೆ ಕಾರ್ಯಕ್ರಮ ನಡೆಯಿತು. ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ವಸಂತ ಬಂಗೇರ, ಗೆಜ್ಜೆಗಿರಿ ಮತ್ತು ಪಡುಮತಿ ಬಿಲ್ಲವ ಸಮಾಜದ ಆರಾಧ್ಯ ಕೇತ್ರಗಳಾಗಿದ್ದು, ಈ ಪುಣ್ಯ ಸನ್ನಿಧಿಗಳನ್ನು ಗೌರವದಿಂದ ಕಾಣುವುದು ಪ್ರತಿಯೋರ್ವ ಪ್ರಜೆಯ ಕರ್ತವ್ಯ ಆಗಿದೆ. ಈ ನಿಟ್ಟಿನಲ್ಲಿ ಜಾತ್ರಮಹೋತ್ಸವ ವಿಧಿವಿದಾನಗಳು, ಪೂಜಾ ಕೆಲಸಗಳು ಯಶಸ್ವಿಯಾಗಿ ನೆರವೇರುವಂತೆ ಸಮಾಜ ಬಾಂಧವರ ಕಾರ್ಯನಿರ್ವಹಿಸಬೇಕು ಎಂದರು.
ದೇಯಿ ಬೈದೈತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿಯ ಉಪಾಧ್ಯಕ್ಷ, ಬಿಲ್ಲವರ ಮಹಾಮಂಡಲದ ಉಪಾಧಾಕ್ಷ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಪೀತಾಂಬರ ಹೇರಾಜೆ ಪ್ರಸ್ತಾವಿಕ ನುಡಿಗಳನ್ನಾಡಿದರು.

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಉಪಾಧ್ಯಕ್ಷ ಹಾಗೂ ವಕೀಲ ಮನೋಹರ ಕುಮಾರ್ ಇಳಂತಿಲ, ಗೆಜ್ಜೆಗಿರಿ ಕ್ಷೇತ್ರದ ವಿಚಾರದಲ್ಲಿ ನ್ಯಾಯಾಲಯದ ಮೆಟ್ಟಲೇರಿರುವ  ಸಮಾಜದ ಬದಲು ಹಿರಿಯ ನಾಯಕರುಗಳಾದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕೆ. ವಸಂತ ಬಂಗೇರರ ನೇತೃತ್ವದಲ್ಲಿ ಸಂಧಾನದ ಮೂಲಕ ಬಗೆಹರಿಸಬೇಕೆಂಬುದು ಗೆಜ್ಜೆಗಿರಿ ಭಕ್ತರ ಆಶಯವಾಗಿದೆ ಎಂದರು.

ಸಂಘದ ಪ್ರಧಾನ ಕಾರ್ಯದರ್ಶಿ ನಾರಾಯಣ ಸುವರ್ಣ ಬೆಳಾಲು, ಕೋಶಾಧಿಕಾರಿ ಹಾಗೂ ಎ.ಪಿ.ಎಂ.ಸಿ ಅಧ್ಯಕ್ಷ ಚಿದಾನಂದ ಎಲ್ದಕ್ಕ, ಬಿಲ್ಲವ ಮಹಿಳಾ ವೇದಿಕೆಯ ಸ್ಥಾಪಕ ಅಧ್ಯಕ್ಷೆ ಸುಜಿತಾ ವಿ.ಬಂಗೇರ, ಸಂಘದ ಮಾಜಿ ಅಧ್ಯಕ್ಷ ಜಯರಾಮ ಬಂಗೇರ, ಯುವವಾಹಿನಿಯ ವೇಣೂರು ಘಟಕದ ಅಧ್ಯಕ್ಷ ಅರುಣ್ ಕೋಟ್ಯಾನ್, ತಾ.ಪಂ ಸದಸ್ಯೆ ಕೇಶವತಿ, ಉಜಿರೆ ಗ್ರಾ.ಪಂ ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಶುಭಕರ ಸಾವ್ಯ, ಪ್ರಕಾಶ್ ನಾರಾವಿ, ಸಂತೋಷ್ ಉತ್ಪಾರು, ಕಿರಣ್ ಕುರುಡ್ಯ, ಸಂಘದ ನಿರ್ದೇಶಕ ಉಮೇಶ್ ಕುಮಾರ್, ಶಾಂಭವಿ ಬಂಗೇರ, ಶಾಂಚಾ ಬಂಗೇರ, ವಿನೋದಿನಿ ರಾಮಪ್ಪ, ರಾಕೇಶ್ ಮೂಡುಕೋಡಿ, ಪುರುಷೋತ್ತಮ ಧರ್ಮಸ್ಥಳ, ಕಿಶೋರ್ ಕುರುಡ್ಯ ಮೊದಲಾದವರು ಉಪಸ್ಥಿತರಿದ್ದರು.

ಶ್ರೀ ಕ್ಷೇತ್ರ ಗೆಜ್ಜೆಗಿರಿ ತಾಲೂಕು ಸಮಿತಿ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ನಾವರ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆ ಹಾಗೂ ನ.ಪಂ ಸದಸ್ಯೆ ರಾಜಶ್ರೀ ರಮಣ್ ವಂದಿಸಿದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.