ಖಾಸಗಿ ಸಂಸ್ಥೆಗಳು ಉದ್ಯೋಗ ಸೃಷ್ಟಿಸಿ ನೌಕರರ ಬಾಳನ್ನು ಬೆಳಗಬೇಕು: ಹರೀಶ್ ಪೂಂಜ
ಬೆಳ್ತಂಗಡಿ : ಕಳೆದ 7 ವರ್ಷಗಳಿಂದ ಬೆಳ್ತಂಗಡಿಯಲ್ಲಿ ಕಾರ್ಯಾಚರಿಸುತ್ತಿರುವ ಸಮರ್ಥ ನಿಧಿ ಲಿಮಿಟೆಡ್ ಸಂಸ್ಥೆಯು ಪ್ರಸ್ತುತ ವಿಸ್ತ್ರತಗೊಂಡು ಬೆಳ್ತಂಗಡಿ ರಾಮ ನಗರದ ಪ್ರಜ್ವಲ್ ಕಾಂಪ್ಲೆಕ್ಸ್ ಕಟ್ಟಡಕ್ಕೆ ಸ್ಥಳಾಂತರಗೊಂಡು ಶುಭಾರಂಭಗೊಂಡಿತು.
ನೂತನ ಸಂಸ್ಥೆಯನ್ನು ಶಾಸಕ ಹರೀಶ್ ಪೂಂಜ ರವರು ಉದ್ಘಾಟಿಸಿ, ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಪ್ರಜ್ವಲ್ ಕಾಂಪ್ಲೆಕ್ಸ್ ಮಾಲಕ ಪ್ರಮೋದ್ ಆರ್. ನಾಯಕ್, ನ.ಪಂ. ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ ಉಪಸ್ಥಿತರಿದ್ದು ನೂತನ ಸಂಸ್ಥೆಗೆ ಶುಭಕೋರಿದರು.
ಸಂಸ್ಥೆಯ ನಿರ್ದೇಶಕರಾದ ಬಾಲಕೃಷ್ಣ, ರಮಿತಾ ನವೀನ್, ಶಾಖಾಧಿಕಾರಿ ದಾಮೋದರ, ಹರಿಪ್ರಸಾದ್, ಯೋಗೀಶ್ ಹಾಗೂ ಸಿಬ್ಬಂದಿ ವರ್ಗದವರು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸಂಸ್ಥೆಯ ಆಡಳಿತ ಪಾಲುದಾರ ನವೀನ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಸ್ಥೆಯ ಉದ್ದೇಶ ಹಾಗೂ ಮುಂದಿನ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು. ಹರೀಶ್ ಕುಮಾರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.