ಮದುವೆ ಸೇರಿ ಎಲ್ಲಾ ಸಭೆ-ಸಮಾರಂಭಗಳಲ್ಲಿ ಮಾರ್ಷಲ್ ನಿಯೋಜನೆ ಖಡ್ಡಾಯ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಮದುವೆ ಸೇರಿ ಎಲ್ಲಾ ರೀತಿಯ ಸಭೆ-ಸಮಾರಂಭಗಳಿಗೆ ಮಾರ್ಷಲ್​ಗಳನ್ನು ನಿಯೋಜಿಸಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಕೋವಿಡ್ ಎರಡನೇ ಅಲೆ, ಲಸಿಕೆ ಸಂಬಂಧ ಎಲ್ಲಾ ಡಿಸಿಗಳ ಜೊತೆ ವಿಡಿಯೋ ಸಂವಾದ ನಡೆಸಿ ಬಳಿಕ ಮಾತನಾಡಿದ ಅವರು, ಮದುವೆ ಹಾಗೂ ಎಲ್ಲಾ ರೀತಿಯ ಸಮಾರಂಭಗಳಲ್ಲಿ ಮಾರ್ಷಲ್‌ಗಳನ್ನು ನಿಯೋಜಿಸಲಾಗುತ್ತದೆ. ಈ ಮಾರ್ಷಲ್​ಗಳು ಸಾಮಾಜಿಕ ಅಂತರ, ಮಾಸ್ಕ್ ಧರಿಸುವ ಬಗ್ಗೆ ತಪಾಸಣೆ ಮಾಡಲಿದ್ದಾರೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಪ್ರಕಾರ ದಂಡ ಸೇರಿ ಇತರ ಕ್ರಮ ಕೈಗೊಳ್ಳಲಿದ್ದಾರೆ.

ಅದೇ ರೀತಿ ಹೋಟೆಲ್, ಡಾಬಾ, ರೆಸ್ಟೋರೆಂಟ್ ಹಾಗೂ ಅಡುಗೆ ಮಾಡುವವರು ಸೇರಿ ಎಲ್ಲಾ ಆಹಾರ ತಯಾರಿಕೆ ಮಾಡುವವರು ಮೇಲೆ ನಿಗಾ ಇಡುವಂತೆ ತಿಳಿಸಲಾಗಿದೆ. ಅವರಿಗೂ ಟೆಸ್ಟಿಂಗ್ ಮಾಡಿಸುವಂತೆ ಆರೋಗ್ಯ ಇಲಾಖೆ ನಿರ್ದೇಶಿಸಿದೆ. ಸಭೆ-ಸಮಾರಂಭಗಳು ತಾಂತ್ರಿಕ ಸಲಹಾ ಸಮಿತಿ ಮಾರ್ಗಸೂಚಿ ವಿರುದ್ಧ ನಡೀತಿವೆ. ಮತ್ತೆ ಸೋಂಕು ಹೆಚ್ಚಾದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ. ಈ ನಿಟ್ಟಿನಲ್ಲಿ ಪ್ರತಿ ಜಿಲ್ಲೆಗೂ ಅಧಿಸೂಚನೆ ಕಳುಹಿಸಿದ್ದು, ಮುಂಬರುವ ದಿನಗಳಲ್ಲಿ ನಡೆಯುವ ಪ್ರತಿಯೊಂದು ಸಮಾರಂಭಗಳಲ್ಲಿ ಖಡ್ಡಾಯವಾಗಿ ಮಾರ್ಷಲ್​ಗಳ ನಿಯೋಜನೆ ಮಾಡುವಂತೆ ಸೂಚಿಸಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.