ಕಳೆಂಜ: ಇಲ್ಲಿಯ ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಯವರ ಮಾರ್ಗದರ್ಶನಲ್ಲಿ, ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ಫೆ.25 ರಿಂದ 26ರವರೆಗೆ ವಿಜೃಂಭಣೆಯಿಂದ ಜರುಗಿತು.
ಫೆ.25 ರಂದು ಬೆಳಿಗ್ಗೆ ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ ನಡೆಯಿತು. ಮಧ್ಯಾಹ್ನ ಶ್ರೀ ಉಮಾಮಹೇಶ್ವರ ದೇವರಿಗೆ ಮಹಾಪೂಜೆ ನಡೆದು, ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು. ರಾತ್ರಿ ರಂಗಪೂಜೆ ನಡೆದು ನಂತರ ಶ್ರೀ ದೇವರ ಭೂತ ಬಲಿ ಉತ್ಸವ, ಕಟ್ಟೆ ಪೂಜೆ, ಬೆಡಿ ಸೇವೆ, ನೃತ್ಯೋತ್ಸವ ಜರುಗಿತು.
ಫೆ. 26 ರಂದು ಬೆಳಿಗ್ಗೆ ಶ್ರೀ ದೇವರ ಉತ್ಸವ ಬಲಿ, ದರ್ಶನ ಬಲಿ, ಬಟ್ಟಲುಕಾಣಿಕೆ, ರಾಜಾಂಗಣ ಪ್ರಸಾದ ವಿತರಣೆ, ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆದು ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು.
ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ಸೇವಾ ಟ್ರಸ್ಟ್ ಪದಾಧಿಕಾರಿಗಳು, ಸರ್ವ ಸದಸ್ಯರು, ಶ್ರೀ ಉಮಾಮಹೇಶ್ವರ ಭಜನಾ ಮಂಡಳಿ ಪದಾಧಿಕಾರಿಗಳು, ಸರ್ವ ಸದಸ್ಯರು ಹಾಗೂ ಊರ-ಪರವೂರ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.