ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸ್ಥಾನಕ್ಕೆ ತುಕ್ರಪ್ಪ ಶೆಟ್ಟಿ ರಾಜಿನಾಮೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕೊಕ್ಕಡ: ಇಲ್ಲಿಯ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರನ್ನು ನೇಮಕಗೊಳಿಸಿ ಧಾರ್ಮಿಕ ದತ್ತಿ ಇಲಾಖೆ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಅದರಂತೆ ಅಧ್ಯಕ್ಷರ ಆಯ್ಕೆಯೂ ನಡೆದಿತ್ತು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸಾಮಾನ್ಯ ಕ್ಷೇತ್ರದಿಂದ ಆಯ್ಕೆಯಾಗಿದ್ದ ಕೌಕ್ರಾಡಿ ಗ್ರಾಮದ ನೂಜಿ ಮನೆಯ ತುಕ್ರಪ್ಪ ಶೆಟ್ಟಿಯವರು ಇಂದು( ಫೆ.27) ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಪ್ರಸ್ತುತ ದಿನಗಳಲ್ಲಿ ತನ್ನ ಹೆಚ್ಚಿನ ಸಮಯ ದೇವಸ್ಥಾನ ಅಭಿವೃದ್ಧಿಗಾಗಿ ಮತ್ತು ವ್ಯವಸ್ಥಾಪನಾ ಸಮಿತಿಯೊಂದಿಗೆ ಸಕ್ರಿಯವಾಗಿ ಪಾಲ್ಗೊಳ್ಳಲು ಕಷ್ಟ ಸಾಧ್ಯವಾಗಿರುವುದರಿಂದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು/ಆಡಳಿತಾಧಿಕಾರಿಗೆ ರಾಜೀನಾಮೆ ಪತ್ರವನ್ನು  ಹಸ್ತಾಂತರಿಸಿದ್ದಾರೆ  ಎಂದು ತಿಳಿದು ಬಂದಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.