ಬೆಳ್ತಂಗಡಿ: ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿಯಾಗಿ ಎನ್. ಗಣೇಶ್ ಗೌಡ ನಾವೂರು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ:  ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿಯಾಗಿ ನಾವೂರು ಗ್ರಾ.ಪಂ. ಅಧ್ಯಕ್ಷ ಎನ್. ಗಣೇಶ್ ಗೌಡ ನಾವೂರು ಆಯ್ಕೆಯಾಗಿದ್ದಾರೆ.
ಬೆಳ್ತಂಗಡಿಯಲ್ಲಿ ನಡೆದ ಮಂಡಲ ಕಾರ್ಯಕಾರಿಣಿ ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣ್ಣೂರು, ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಶಾಸಕ ಹರೀಶ್ ಪೂಂಜರವರ ಸಮ್ಮಖದಲ್ಲಿ ಇವರನ್ನು ನೂತನ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಯಿತು.

ಈಗಾಗಲೇ ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ್ ರಾವ್  ಕೂಡಾ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಎನ್. ಗಣೇಶ್ ಗೌಡ ರವರು ಕೂಡಾ ಪ್ರಧಾನ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.

ಇವರು ಪ್ರಸ್ತುತ ನಾವೂರು ಗ್ರಾ.ಪಂ ಅಧ್ಯಕ್ಷರಾಗಿ, ಬಿಜೆಪಿ ಜಿಲ್ಲಾ ರೈತ ಮೋರ್ಚಾದ ಉಪಾಧ್ಯಕ್ಷರಾಗಿ, ನಾವೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ, ನಾವೂರು ಗೋಪಾಲಕೃಷ್ಣ ದೇವಸ್ಥಾನ ಟ್ರಸ್ಟ್ನ ಕಾರ್ಯದರ್ಶಿಯಾಗಿ, ನಾವೂರು ಗುರುಕೃಪಾ ಭಜನಾ ಮಂಡಳಿಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.