ಮಾ.11: ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನ ಲೋಕಾರ್ಪಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ-ನಾಲ್ಕೂರು-ತೆಂಕಕಾರಂದೂರು ಇದರ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನ ಲೋಕಾರ್ಪಣೆ ಹಾಗೂ  ಬ್ರಹ್ಮಶ್ರೀ ನಾರಾಯಣ ಗುರುಗಳ 166ನೇ ವರ್ಷದ ಗುರು ಜಯಂತಿ ಹಾಗೂ ಶ್ರೀ ಸತ್ಯನಾರಾಯಣ ಪೂಜೆ ಯು ಮಾ.10 ಮತ್ತು 11ರಂದು ಬಳಂಜ ಸಂಘದ ವಠಾರದಲ್ಲಿ ನಡೆಯಲಿದೆ  ಎಂದು  ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ  ಅಧ್ಯಕ್ಷ  ಪ್ರವೀಣ್ ಕುಮಾರ್ ಹೆಚ್ ಎಸ್ ಹಾಗೂ ಸಮಿತಿಯ ಪ್ರಧಾನ ಸಂಚಾಲಕ ಸಂತೋಷ್ ಪಿ ಕೋಟ್ಯಾನ್ ಹೇಳಿದರು.

ಮಾ.2ರಂದು ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ಕರೆದ   ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಸುಮಾರು 1ಕೋಟಿ ರೂ. ವೆಚ್ಚದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದ ಜೀರ್ಣೋದ್ಧಾರ ಕೆಲಸ ಕಾರ್ಯಗಳು ಸಾಗುತ್ತಿದ್ದು, ಮಾ.10 ಹಾಗೂ 11ರಂದು ವಿವಿಧ ವೈಧಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗೊಳೊಂದಿಗೆ ವಿಜೃಂಭಣೆಯಿಂದ ನೂತನ ಸಮುದಾಯ ಭವನ ಲೋಕಾರ್ಪಣೆಗೊಳ್ಳಲಿದೆ.

ಮಾ.11ರಂದು ಬೆಳಿಗ್ಗೆ  9.30ಕ್ಕೆ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಕರ್ನಾಟಕ ಸರಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಸಮುದಾಯ ಭವನ ಲೋಕಾರ್ಪಣೆಗೊಳಿಸಲಿದ್ದಾರೆ. ಬಳಂಜ  ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಅಧ್ಯಕ್ಷ  ಪ್ರವೀಣ್ ಕುಮಾರ್ ಹೆಚ್.ಎಸ್ ಅಧ್ಯಕ್ಷತೆ ವಹಿಸಲಿದ್ದು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ಮುಂಡಪ್ಪ ಪೂಜಾರಿ ಸಭಾವೇದಿಕೆ ಉದ್ಘಾಟಿಸಲ್ಲಿದ್ದಾರೆ.

ವಿಧಾನಪರಿಷತ್ ಸದಸ್ಯ ಹಾಗೂ ಮಾಜಿ ರಾಜ್ಯ ಸಭಾ ಸದಸ್ಯ  ಬಿ.ಕೆ ಹರಿಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಲ್ಲಿದ್ದು, ವಿಧಾನಪರಿಷತ್ ಸದಸ್ಯ  ಪ್ರತಾಪ್ ಸಿಂಹ ನಾಯಕ್ ನಾಮಫಲಕ ಅನಾವರಣಗೊಳಿಸಲ್ಲಿದ್ದಾರೆ.

ರಾಷ್ಟ್ರೀಯ ಬಿಲ್ಲ ಮಹಾಮಂಡಲ ಮೂಲ್ಕಿ ಡಾ| ರಾಜಶೇಖರ್ ಕೋಟ್ಯಾನ್ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದು, ಮುಖ್ಯ ಅತಿಥಿಗಳಾಗಿ  ಸಂಗಬೆಟ್ಟು  ಕ್ಷೇತ್ರದ ಜಿ,ಪಂ ಸದಸ್ಯ ಎಂ. ತುಂಗಪ್ಪ ಬಂಗೇರ, ಮಂಗಳೂರು ಪನಾಮ ಕಾರ್ಪೊರೇನ್ ಲಿ. ಚೇರ್‌ಮ್ಯಾನ್ ಮತ್ತು ಸಿ.ಇ.ಒ ವಿವೇಕ್ ರಾಜ್ ಪೂಜಾರಿ, ಉದ್ಯಮಿ ಮುಂಬಯಿ ಸುರೇಶ್ ಪೂಜಾರಿ ಅರ್ವ,  ನಾರಾವಿ ಜಿ.ಪಂ ಸದಸ್ಯ ಧರಣೇಂದ್ರ ಕುಮಾರ್, ಬೆಳ್ತಂಗಡಿ ಯುವ ಬಿಲ್ಲವ ವೇದಿಕೆ ಅಧ್ಯಕ್ಷ ರಂಜಿತ್ ಹೆಚ್.ಡಿ ಸುಧಾಮ, ಬೆಳ್ತಂಗಡಿ ಬಿಲ್ಲವ ಮಹಿಳಾ ವೇದಿಕೆ  ಅಧ್ಯಕ್ಷೆ ರಾಜಶ್ರೀ ರಮಣ್ ಗೌರವ ಉಪಸ್ಥಿತಲಿರಲಿದ್ದಾರೆ.

ಬೆಳಿಗ್ಗೆ ಗಂಟೆ 6ಕ್ಕೆ ಪ್ರಾರ್ಥನೆ, ಗಣಹೋಮ, ಸತ್ಯನಾರಾಯಣ ಪೂಜೆ, ಶ್ರೀ ಗುರುಪೂಜೆ, 9.30ಕ್ಕೆ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನ ಲೋಕಾರ್ಪಣೆ, ಸಭಾ ಕಾರ್ಯಕ್ರಮ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ 5:30ರಿಂದ ಗೀತ-ಸಾಹಿತ್ಯ-ಸಂಭ್ರಮ, ಸಂಜೆ ಗಂಟೆ 6:30ರಿಂದ ಸಮಾರೋಪ ಸಮಾರಂಭ, ಅನ್ನಸಂತರ್ಪಣೆ, ರಾತ್ರಿ ಗಂಟೆ 9ರಿಂದ ನಮಸ್ಕಾರ ಮಾಸ್ಟ್ರೆ ನಾಟಕ ಪ್ರದರ್ಶನಗೊಳ್ಳಲಿದೆ.

ಮಾರ್ಚ್ 10ರಂದು ಬೆಳಿಗ್ಗೆ 9;30ಕ್ಕೆ ಬಳಂಜ- ನಾಲ್ಕೂರು-ತೆಂಕಕಾರಂದೂರು ಗ್ರಾಮಸ್ಥರಿಂದ ಹೊರಕಾಣಿಕೆ ಮೆರವಣಿಗೆ ನಡೆಯಲ್ಲಿದ್ದು, ಸಮರ್ಪಣೆಗೆ ಬೆಳ್ತಂಗಡಿ ಸುವರ್ಣ ಆರ್ಕೆಡ್ ಸಂತೆಕಟ್ಟೆ ಇದರ ಮಾಲಕ ಶ್ರೀ ವೈ ನಾಣ್ಯಪ್ಪ ಪೂಜಾರಿ ಚಾಲನೆ ನೀಡಲಿದ್ದಾರೆ.

 ಮಾ.11 ರಂದು ಬೆಳಿಗ್ಗೆ 11ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ವಕೀಲರು ಮತ್ತು ನೋಟರಿ ಹಾಗೂ ಮಂಗಳೂರು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರ ಇದರ ಕೋಶಾಧಿಕಾರಿಗಳು ಪದ್ಮರಾಜ್ ಆರ್ ಉಗ್ರಾಣ ಮಹೂರ್ತ ನೆರವೇರಿಸಲಿದ್ದಾರೆ. ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಗೌರವ ಮಾರ್ಗದರ್ಶಕ ಕೆ. ವಸಂತ ಸಾಲಿಯಾನ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘ ಇದರ ಪೂರ್ವಾಧ್ಯಕ್ಷ  ಗಂಗಾಧರ ಮಿತ್ತಮಾರು, ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ಲಡ್ಕ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ನಿಕಟಪೂವಾಧ್ಯಕ್ಷ ಸೋಮನಾಥ ಬಂಗೇರ ವರ್ಪಾಳೆ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ  ಪೂವಾಧ್ಯಕ್ಷರುಗಳಾದ  ಭಗೀರಥ ಜಿ,  ಯೋಗೀಶ್ ಕುಮಾರ್ ಕೆ.ಎಸ್, ಪ್ರಗತಿಪರ ಕೃಷಿಕ ಕೊಡಂಗೆ ಸಂಜೀವ ಪೂಜಾರಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ  ಗುರುವಾಯನಕೆರೆ ವಲಯ  ಯೋಜನಾಧಿಕಾರಿ  ಯಶವಂತ ಎಸ್. ಉಪಸ್ಥಿತರಿರಲಿದ್ದಾರೆ.

ಅಂದು ಸಂಜೆ 6ರಿಂದ ಶ್ರೀ ರಘುನಾಥ ಶಾಂತಿಯವರ ನೇತೃತ್ವದಲ್ಲಿ ವೈಧಿಕ ವಿಧಿವಿಧಾನಗಳು ನಡೆಯಲಿದ್ದು,  ಸಂಜೆ 6;30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಮಾಜಿ ಶಾಸಕ, ಸಣ್ಣ ಕೈಗಾರಿಕಾ ನಿಗಮ, ಕರ್ನಾಟಕ ಸರಕಾರ ಇದರ ಮಾಜಿ ಅಧ್ಯಕ್ಷ ಕೆ. ವಸಂತ ಬಂಗೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಬಳಂಜ ಇದರ ಗೌರವಾಧ್ಯಕ್ಷ   ಹೆಚ್. ದರ್ಣಪ್ಪ ಪೂಜಾರಿ ಗೌರವ ಉಪಸ್ಥಿತರಿರಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಬಿಲ್ಲವ ಮಹಾಮಂಡಲ  ಮೂಲ್ಕಿ ಇದರ ಉಪಾಧ್ಯಕ್ಷ, ನಿವೃತ್ತ ಎಸ್.ಪಿ ಪಿತಾಂಬರ ಹೇರಾಜೆ, ಬಿಜೆಪಿ ಬೆಳ್ತಂಗಡಿ ಮಂಡಲದ ಅಧ್ಯಕ್ಷ ಜಯಂತ್ ಕೋಟ್ಯಾನ್, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ವಿಭಾಗ ಪ್ರಮುಖ ಕೇಶವ ಬಂಗೇರ, ವಿಶೇಷ ಕರ್ತವ್ಯ ನಿರ್ವಹಣಾಧಿಕಾರಿ ಜಗನ್ನಾಥ ಬಂಗೇರ, ಬಂಟ್ವಾಳ ಸಾರಿಗೆ ಇಲಾಖೆ ಅಧೀಕ್ಷಕ ಚರಣ್ ಕುಮಾರ್, ಉದ್ಯಮಿ ರವಿ ಪೂಜಾರಿ ಚಿಲಿಂಬಿ, ಮಂಗಳೂರು ಬಿರುವೆರ್ ಕುಡ್ಲ ಇದರ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್‌ಬಾಗ್, ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ಡಾ| ರಾಜರಾಮ್ ಮೊದಲಾದವರು ಉಪಸ್ಥಿತರಿರಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಚಾರ ಮತ್ತು ಮಾಧ್ಯಮ ಸಮಿತಿ ಸಂಚಾಲಕ ಮನೋಹರ ಬಳಂಜ, ಸಾಂಸ್ಕೃತಿಕ ಮತ್ತು ಕಾರ್ಯಕ್ರಮ ನಿರ್ವಹಣಾ ಸಮಿತಿ ಸಂಚಾಲಕ  ಚಂದ್ರಹಾಸ ಬಳಂಜ, ಬೆಳಕು ಮತ್ತು ಧ್ವನಿವರ್ಧಕ ಸಮಿತಿ ಸಂಚಾಲಕ  ದಿನೇಶ್ ಪೂಜಾರಿ ಅಂತರ, ಸಾಂಸ್ಕೃತಿಕ ಕಾರ್ಯಕ್ರಮದ ಸಹಸಂಚಾಲಕ  ಜಗದೀಶ್ ಪರಾರಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.