ಮಾ.6: ಪಡಂಗಡಿ ಗ್ರಾ.ಪಂ. ಸ್ವಚ್ಛ ಸಂಕೀರ್ಣ ಘಟಕದ ಲೋಕಾರ್ಪಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಪಡಂಗಡಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ, ಪಡಂಗಡಿ ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆ ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ ಯೋಜನೆಯಡಿಯಲ್ಲಿ ತ್ಯಾಜ್ಯ ವಿಂಗಡನೆಯ ಜಾಗೃತಿ ಮೂಡಿಸುವ ವಿಶೇಷ ಆಂದೋಲನದ ಸಮಾರೋಪ ಮತ್ತು ಸ್ವಚ್ಛ ಸಂಕೀರ್ಣ ಘಟಕ ಲೋಕಾರ್ಪಣೆ ಮಾ. 6ರಂದು ಗರ್ಡಾಡಿ ಗ್ರಾಮದ ಹಚ್ಚಾಡಿಯಲ್ಲಿ ನಡೆಯಲಿದೆ.
ಶಾಸಕ ಹರೀಶ್ ಪೂಂಜ ಸಂಕೀರ್ಣವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಸ್ವಚ್ಛತಾ ವಾಹನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಚಾಲನೆ ನೀಡಲಿದ್ದಾರೆ. ಇನ್ನೋರ್ವ ವಿಧಾನ ಪರಿಷತ್ ಸದಸ್ಯ ಕೆ ಹರೀಶ್ ಕುಮಾರ್ ರವರು ವಿಶೇಷ ಚೇತನರಿಗೆ ಸಹಾಯಧನ ವಿತರಣೆ, ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ರವರು ಕಸ ಸಂಗ್ರಹದ ಬಕೆಟ್ ವಿತರಣೆ ಹಾಗೂ ತಾ.ಪಂ ಅಧ್ಯಕ್ಷೆ ದಿವ್ಯಜ್ಯೋತಿರವರು ಕರಪತ್ರ ಬಿಡುಗಡೆಗೊಳಿಸಲಿದ್ದಾರೆ.
ಪಡಂಗಡಿ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಮೀನಾಕ್ಷಿ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಸಂಧರ್ಭದಲ್ಲಿ ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರು ಪುಸ್ತಕ ಜೋಳಿಗೆ ಕಾರ್ಯಕ್ರಮದಡಿ ಪಡಂಗಡಿ ಗ್ರಂಥಾಲಯಕ್ಕೆ ಪುಸ್ತಕ ಕೊಡುಗೆ ನೀಡಲಿದ್ದಾರೆ. ಕಾಯಕ್ರಮದಲ್ಲಿ ಜನಪ್ರತಿನಿಧಿಗಳು, ಗಣ್ಯರು, ವಿವಿಧ ಇಲಾಖಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಪಂಚಾಯತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.