ಮಡಂತ್ಯಾರು: ಉಚಿತ ಆಯುಷ್ಮಾನ್ ಕಾರ್ಡ್ ವಿತರಣಾ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮಡಂತ್ಯಾರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮಡಂತ್ಯಾರು, ಶ್ರೀ ಕ್ರಷ್ಣ ಜನ್ಮಾಷ್ಟಮಿ ಸಮಿತಿ ಮಡಂತ್ಯಾರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಮಡಂತ್ಯಾರು ವಲಯ ಇದರ ಜಂಟಿ ಆಶ್ರಯದಲ್ಲಿ ಉಚಿತ ಆಯುಷ್ಮಾನ್ ಕಾರ್ಡ್ ವಿತರಣಾ ಕಾರ್ಯಕ್ರಮ ನಡೆಯಿತು.

ಮಾ.3ರಂದು ಮಡಂತ್ಯಾರು ಗಣಪತಿ ಮಂಟಪದಲ್ಲಿ ಭಾರತ ಸರ್ಕಾರದ ಆರೋಗ್ಯ ಇಲಾಖೆಯ ಕೊಡಮಾಡುವ ಉಚಿತ ಆಯುಷ್ಮಾನ್ ಕಾರ್ಡ್ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಮಡಂತ್ಯಾರು ಗ್ರಾ.ಪಂ ಅಧ್ಯಕ್ಷೆ ಶಶಿಪ್ರಭಾ ಆಯುಷ್ಮಾನ್ ಕಾರ್ಡ್ ವಿತರಿಸಿದರು. ಗ್ರಾ.ಪಂ ಸದಸ್ಯ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಹರೀಶ್ ಶೆಟ್ಟಿ ಪದೆಂಜಿಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.


ಮುಖ್ಯ ಅತಿಥಿಗಳಾಗಿ ಮಡಂತ್ಯಾರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಮಡಂತ್ಯಾರು ಗ್ರಾ.ಪಂ ಉಪಾಧ್ಯಕ್ಷೆ ಸಂಗೀತ ಶೆಟ್ಟಿ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಸಂಜೀವ ಶೆಟ್ಟಿ ಮುಗೆರೋಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಡಂತ್ಯಾರು ವಲಯದ ಮೇಲ್ವಿಚಾರಕ ಆದಿತ್ಯ, ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಕೋಶಾಧಿಕಾರಿ ನಾರಾಯಣ ಪೂಜಾರಿ ಮಚ್ಚಿನ, ಶ್ರೀ ಗಣೇಶೋತ್ಸವ ಸಮಿತಿ ಕಾರ್ಯದರ್ಶಿ ಉಮೇಶ್ ಸುವರ್ಣ, ಜಿ.ಪಂ ಮಾಜಿ ಸದಸ್ಯೆ ತುಳಸೆ ಹಾರಬೆ ಸೇರಿದಂತೆ ಗ್ರಾ.ಪಂ ಸದಸ್ಯರು ಉಪಸ್ಥಿತರಿದ್ದರು.


ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು, ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಪಧಾದಿಕಾರಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸೇವಾನಿರತೆಯರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು. 

ಗ್ರಾ.ಪಂ ಸದಸ್ಯ ಕಾಂತಪ್ಪ ಗೌಡ ಪ್ರಸ್ತಾವಿಕವಾಗಿ ಮಾತನಾಡಿ ಅಯುಷ್ಮಾನ್ ಕಾರ್ಡ್ ಉಪಯೋಗಿಸುವ ಬಗ್ಗೆ ಮಾಹಿತಿ ನೀಡಿದರು. ಅಮಿತಾ ಅಶೋಕ್ ಭಂಡಾರಿ ಪ್ರಾರ್ಥಿಸಿ, ನವೀನ್ ಕೋಡ್ಲಕ್ಕೆ ಸ್ವಾಗತಿಸಿ, ಸತೀಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.