ಮದ್ದಡ್ಕದ ಉದ್ಯಮಿ ನಾಪತ್ತೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮದ್ದಡ್ಕ: ಉದ್ಯಮಿ, ಮದ್ದಡ್ಕದಲ್ಲಿ ಕಾರ್ಯಾಚರಿಸುತ್ತಿರುವ ಚಿನ್ನು ಫಾಸ್ಟ್ ಫುಡ್ ಸಂಸ್ಥೆಯ ಮಾಲಕ ಅಬ್ದುಲ್ ರಹಿಂ ರವರು ಕಳೆದ 4 ದಿನಗಳಿಂದ ನಾಪತ್ತೆಯಾಗಿದ್ದಾರೆ.
ಮಾ.1 ರಂದು ಬೆಳ್ತಂಗಡಿಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರಟು ಹೋದವರು ಇದುವರೆಗೂ ಮರಳಿ ಬಾರದೆ ನಾಪತ್ತೆಯಾಗಿದ್ದಾರೆ ಎಂದು ಅವರ ಪತ್ನಿ ಫಾತಿಮಾ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಅಬ್ದುಲ್ ರಹಿಂ ರವರು ವ್ಯವಹಾರದಲ್ಲಿ ಬಹಳ ನಷ್ಟ ಅನುಭವಿಸಿದ್ದು, ಇದೇ ಕಾರಣದಿಂದ ತುಸು ಚಿಂತೆಗೀಡಾಗಿದ್ದರು ಎಂದು ಅವರ ಪತ್ನಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.